ಕರಾವಳಿಕ್ರೈಂ

ಉಪ್ಪಿನಂಗಡಿ:ಸ್ಕೂಟಿ ಮತ್ತು ಕಾರ್ ನಡುವೆ ಭೀಕರ ಅಪಘಾತ,ಸ್ಕೂಟಿ ಸವಾರ ಸ್ಥಳದಲ್ಲೇ ಮೃತ್ಯು,ಇಬ್ಬರು ಮಕ್ಕಳು ಗಂಭೀರ

367

ನ್ಯೂಸ್ ನಾಟೌಟ್ :ಉಪ್ಪಿನಂಗಡಿ ಸಮೀಪ ಕಲ್ಲೇರಿ ಎಂಬಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಇಂದು(ಎ.22) ಸಂಭವಿಸಿದೆ.ಕಳಂಜಿಬೈಲ್ ನಿವಾಸಿ ಜಾಫರ್ (35) ಮೃತ ದುರ್ದೈವಿ.

ಈದುಲ್ ಫಿತ್ರ್ ಸಂಭ್ರಮದಲ್ಲಿದ್ದ ಕುಟುಂಬ ತನ್ನೆರಡು ಮಕ್ಕಳ ಜತೆ ನೆಂಟರಸ್ಥರ ಮನೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಜಾಫರ್ ರವರ ಸ್ಕೂಟರ್ ಗೆ ರಾಂಗ್ ಸೈಡ್ ನಲ್ಲಿ ಬಂದ ಕಾರೊಂದು ಢಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಜಾಫರ್ ರವರ ಸ್ಕೂಟರ್ ಪೊದೆಗೆ ಹೋಗಿ ಬಿದ್ದಿದ್ದು, ಜಾಫರ್ ರವರು ಸ್ಥಳದಲ್ಲೇ ಅಸು ನೀಗಿದ್ದಾರೆ ಎಂದು ತಿಳಿದು ಬಂದಿದೆ. ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.

See also  ಬೆಳ್ತಂಗಡಿ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget