ಕರಾವಳಿಸುಳ್ಯ

ಉಪ್ಪಿನಂಗಡಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ,ಎರಡು ದೋಣಿ ಹಾಗೂ ಒಂದು ಹಿಟಾಚಿ ವಶಪಡೆದ ಅಧಿಕಾರಿಗಳು

ನ್ಯೂಸ್ ನಾಟೌಟ್ : ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿ ಮರಳುಗಾರಿಕೆಗೆ ಬಳಸಿದ ಎರಡು ದೋಣಿ ಹಾಗೂ ಒಂದು ಹಿಟಾಚಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಸರಳೀಕಟ್ಟೆ ಹೊಸಮೊಗ್ರು ಎಂಬಲ್ಲಿ ನಡೆದಿದೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ್ದಾರೆ.ಹೊಸಮೊಗ್ರು ಎಂಬಲ್ಲಿ ನೇತ್ರಾವತಿ ನದಿ ದಡದಲ್ಲಿ ಡ್ರಿಜ್ಜಿಂಗ್ ಯಂತ್ರ ಬಳಸಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿರುವುದರ ಬಗ್ಗೆ ಮಾಹಿತಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಪಡೆದು ದಾಳಿ ನಡೆಸಿದ್ದರು. ಅಕ್ರಮವಾಗಿ ಮರಳು ತೆಗೆಯಲು ಬಳಸುತ್ತಿದ್ದ ಎರಡು ದೋಣಿ ಹಾಗೂ ಒಂದು ಹಿಟಾಚಿ ಮತ್ತು ಡ್ರಿಜ್ಜಿಂಗ್ ಯಂತ್ರವನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಕಡಬ ಆನೆ ದಾಳಿ ಪ್ರಕರಣ: ಸ್ಥಳಕ್ಕೆ ಸಚಿವರು, ಜಿಲ್ಲಾಧಿಕಾರಿಗಳು ಭೇಟಿ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ತಂಬಾಕು ಸೇವನೆಯ ಚಟಕ್ಕೆ ದಾಸರಾಗಿದ್ದೀರಾ..? ಇದರಿಂದ ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತೆ..?

ಭ್ರಷ್ಟಾಚಾರ ನಿರ್ಮೂಲನೆಯಾದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ: ಅಶೋಕ್‌ ರೈ