Latest

ಉಪ್ಪಿನಂಗಡಿ : ಕೋಮು ದ್ವೇಷ ಸಂದೇಶ ಪೋಸ್ಟ್‌ ; ಪ್ರಕರಣ ದಾಖಲು

382

ನ್ಯೂಸ್‌ ನಾಟೌಟ್:ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಪ್ರಚೋದನಕಾರಿ ಹಾಗೂ ಕೋಮು ಭಾವನೆಗೆ ಧಕ್ಕೆ ತರುವ ಸಂದೇಶ ರವಾನಿಸಿ ಅಶಾಂತಿಗೆ ಕಾರಣ ಆಗುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನ “Maikala trolls” ಎಂಬ ಹೆಸರಿನ ಖಾತೆಯಲ್ಲಿ ಕಿಡಿಗೇಡಿಗಳು ಇತ್ತೀಚೆಗೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವಕನ ಕೊಲೆಗೆ ಸಂಬಂಧಿಸಿದಂತಹ ಕೋಮುದ್ವೇಷವನ್ನುಂಟು ಮಾಡುವಂತಹ ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಈ ಬಗ್ಗೆ ಜೂನ್ 2ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

 

See also  ಕನ್ನಡ ಕಿರುತೆರೆಯ ಖ್ಯಾತ ನಟ ಶ್ರೀಧರ್‌ ನಾಯಕ್‌ ಇನ್ನಿಲ್ಲ , ‘ಪಾರು’ ಧಾರಾವಾಹಿಯಲ್ಲಿನಟಿಸಿದ್ದ ಜನಪ್ರಿಯ ಕಿರುತೆರೆ ನಟ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget