ಉಪ್ಪಿನಂಗಡಿಪುತ್ತೂರು

ಉಪ್ಪಿನಂಗಡಿ: ಮಗು ಸಹಿತ ದಂಪತಿ ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ, ಪರಾರಿಯಾಗಲು ಯತ್ನಿಸಿದ ಟ್ಯಾಂಕರ್ ಚಾಲಕನ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

181

ನ್ಯೂಸ್ ನಾಟೌಟ್: ದ್ವಿಚಕ್ರ ವಾಹನವೊಂದಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮಗು ಸಹಿತ ದಂಪತಿಗೆ ಗಂಭೀರ ಗಾಯಗೊಂಡಿರುವ ಘಟನೆ ನೆಕ್ಕಿಲಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ನೆಕ್ಕಿಲಾಡಿಯಲ್ಲಿ ನಿರ್ಮಾಣ ಹಂತದಲ್ಲಿರುವ ಫ್ಲೈ ಓವರ್ ಬಳಿ ಈ ಅಪಘಾತ ಸಂಭವಿಸಿದೆ. ವಾಹನವೊಂದನ್ನು ಹಿಂದಿಕ್ಕಿಕೊಂಡು ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತ ನಡೆದ ಬಳಿಕ ಚಾಲಕ ಟ್ಯಾಂಕರ್ ನಿಂದ ಇಳಿದು ಓಡಲು ಯತ್ನಿಸಿದ್ದು, ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುರ್ಘಟನೆಯಲ್ಲಿ ಸರಳೀಕಟ್ಟೆಯ ಉರ್ಲಡ್ಕ ನಿವಾಸಿಗಳಾದ ನೆಕ್ಕಿಲಾಡಿಯ ಮಹಮ್ಮದ್ ಶರೀಫ್, ಅವರ ಪತ್ನಿ ಆಯಿಷಾ ತಸ್ಲೀಮಾ ಹಾಗೂ ಮಗು ಮುಹಮ್ಮದ್ ರಫಿ ಗಾಯಗೊಂಡಿದ್ದಾರೆ. ಮಹಮ್ಮದ್ ಶರೀಫ್ ಅವರ ಕಾಲಿಗೆ ಹಾಗೂ ಆಯಿಷಾ ತಸ್ಲೀಮಾ ಅವರ ತಲೆಗೆ ಗಂಭೀರ ಗಾಯಗಳಾಗಿದೆ. ಸಣ್ಣಪುಟ್ಟ ಗಾಯಗಳಿಂದ ಮಗು ಅಪಾಯದಿಂದ ಪಾರಾಗಿದೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

See also  ದಬಕ್ ದಬಾ ಐಸಾ..! ರಸ್ತೆ ಮಧ್ಯೆ ಕೆಟ್ಟು ನಿಂತ ಓಮ್ನಿ ಕಾರನ್ನು ತಳ್ಳಿದ ಶಾಸಕ ಅಶೋಕ್ ರೈ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget