ಉಪ್ಪಿನಂಗಡಿ: ಬೈಕ್ ಸವಾರರೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಎಸ್ಕೇಪ್ ಆಗಿರುವ ಘಟನೆ ನೆಕ್ಕಿಲಾಡಿ ಗ್ರಾಮದ ಬೊಳ್ಳಾರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅರ್ಚಕ ಶ್ರೀಕಾಂತ್ ಭಟ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಉಪ್ಪಿನಂಗಡಿಯಿಂದ ಪೆರ್ನೆ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಟೆಂಪೋವೊಂದು ಅತೀವೇಗದ ಚಾಲನೆಯಿಂದ ಗುದ್ದಿ ಪರಾರಿಯಾಗಿದೆ ಎಂದು ಹೇಳಲಾಗಿದೆ.