ಉಪ್ಪಿನಂಗಡಿಕರಾವಳಿಕ್ರೈಂಪುತ್ತೂರುವೈರಲ್ ನ್ಯೂಸ್

ಉಪ್ಪಿನಂಗಡಿ: ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರ..! ಯಾರಿಗೂ ತಿಳಿಸದಂತೆ ಕೊಲೆ ಬೆದರಿಕೆ..!

202

ನ್ಯೂಸ್ ನಾಟೌಟ್: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆಕೆಯ ಅತ್ಯಾಚಾರವೆಸಗಿದ ಪ್ರಕರಣ ಉಪ್ಪಿನಂಗಡಿಯಲ್ಲಿ ಬೆಳಕಿಗೆ ಬಂದಿದೆ.

ಈ ಸಂಬಂಧ ವಿಟ್ಲ ನಿವಾಸಿ ಸತೀಶ್‌ (38) ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ನೆಲ್ಯಾಡಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ. 14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿಯು ದೂರವಾಣಿ ಮೂಲಕ ಸಂಪರ್ಕಿಸಿ ಆತ್ಮೀಯತೆ ಬೆಳೆಸಿದ್ದ ಎನ್ನಲಾಗಿದೆ. ಜು. 21ರಂದು ಆಕೆಯನ್ನು ನೆಲ್ಯಾಡಿಗೆ ಕರೆಸಿಕೊಂಡು ಪಿಕಪ್‌ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಹಾಗೂ ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡಲಾಗುವುದು ಎಂದು ಬೆದರಿಕೆ ಒಡ್ಡಿರುತ್ತಾನೆಂದು ಸಂತ್ರಸ್ತೆಯು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ. ಈ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Click

https://newsnotout.com/2024/09/chamundi-betta-mysore-food-issue-during-night-to-devotees/
See also  ಕೋತಿಗೆಂದು ಅಪ್ಪ ಎಸೆದ ಕೊಡಲಿ ಮಗನ ಕತ್ತು ಸೀಳಿದೆ..! ಮಗುವಿನ ಸಾವಿನ ಬಗ್ಗೆ ಸಂಬಂಧಿಕರಿಗೆ ಅನುಮಾನ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget