ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ವೃದ್ಧ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ಉಪ್ಪಿನಂಗಡಿ ಬಳಿ ನಡೆದಿದೆ. ಸಾವಿಗೀಡಾದವರನ್ನು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಮುತ್ತಪ್ಪ ಶೆಟ್ಟಿ (70 )ಎಂದು ಗುರುತಿಸಲಾಗಿದೆ. ನದಿಗೆ ಹಾರಿದ್ದ ಅವರನ್ನು ರಕ್ಷಿಸಲು ಸ್ಥಳೀಯ ಯುವಕರು ಪ್ರಯತ್ನ ಪಟ್ಟರೂ ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.
previous post