ಕರಾವಳಿಕ್ರೈಂ

ಉಪ್ಪಿನಂಗಡಿ ಠಾಣಾ ಹೆಡ್ ಕಾನ್‌ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ನಿಧನ

ನ್ಯೂಸ್ ನಾಟೌಟ್ : ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ಜಿ ರವರು ಇಂದು( ಜು.12 ರಂದು) ನಿಧನರಾಗಿದ್ದಾರೆ.

ಇವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸುಮಾರು 6 ವರ್ಷಗಳಿಂದ ಕರ್ತವ್ಯ ನಿರ್ವಹಿಸಿಕೊಂಡಿದ್ದರು.ಅನಾರೋಗ್ಯದಿಂದಾಗಿ ಅವರು 2022 ರಿಂದ ರಜೆಯಲ್ಲಿದ್ದರು ಎನ್ನಲಾಗಿದೆ.ಇಂದು ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆಂದು ತಿಳಿದು ಬಂದಿದೆ.

ಮೂಲತಃ ಮಾಣಿ ಸಮೀಪದ ನೇರಳಕಟ್ಟೆ ನಿವಾಸಿಯಾಗಿರುವ ಕೃಷ್ಣಪ್ಪ ರವರು ಪೊಲೀಸ್ ಇಲಾಖೆಯಲ್ಲಿ ಸುಮಾರು 26 ವರುಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು.ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

Related posts

ಸುಳ್ಯ: ಕೋಲು ಜೇನಿಗೆಂದು ಬೆಂಕಿ ಹಚ್ಚಿ ಎಡವಟ್ಟು,  ಧಗಧಗನೆ ಹೊತ್ತಿ ಉರಿದ ತೆಂಗಿನ ಮರ..!

ರೈಲು ನಿಲ್ದಾಣದ ಬಳಿ ಬಾಲಕಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ತಾಯಿಯೇ ಪ್ರಿಯಕರನ ಜೊತೆ ಸೇರಿ ಮಗುವನ್ನು ಕೊಂದಳಾ..?

ಜಲೀಲ್ ಕೊಲೆ ಪ್ರಕರಣ:ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು