Latestಉಪ್ಪಿನಂಗಡಿ

ಉಪ್ಪಿನಂಗಡಿ: ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆ ನಾಪತ್ತೆ, ಪತಿ ಹಬ್ಬಕ್ಕಾಗಿ ಊರಿಗೆ ಹೋಗಿ ಹಿಂತಿರುಗಿ ಬರುವಾಗ ಪತ್ನಿ ದಿಢೀರ್ ಕಣ್ಮರೆ..!

192

ನ್ಯೂಸ್ ನಾಟೌಟ್ : ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಾವೇರಿ ಮೂಲದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಪತ್ತೆಯಾದ ಮಹಿಳೆಯನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸಂಕ್ರಿಕೊಪ್ಪ ನಿವಾಸಿ ಭೀಮಪ್ಪ ಎಂಬವರ ಪತ್ನಿ ರೇಷ್ಮಾ ಮಲಲಿ ಭಜಂತ್ರಿ (26) ಎಂದು ಗುರುತಿಸಲಾಗಿದೆ. ಆಕೆ ಪತಿಯೊಂದಿಗೆ 34 ನೇ ನೆಕ್ಕಿಲಾಡಿ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದು, ಭೀಮಪ್ಪ ನಾಗರ ಪಂಚಮಿಯ ಹಬ್ಬಕ್ಕಾಗಿ ಜು.26 ರಂದು ಹಾವೇರಿಗೆ ಹೋಗಿ ಜು.30 ರಂದು ಹಿಂತಿರುಗಿ ಬರುವಾಗ ಮನೆಯಲ್ಲಿದ್ದ ಪತ್ನಿ ನಾಪತ್ತೆಯಾಗಿದ್ದಾಳೆಂದು , ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲವೆಂದು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

See also  ತರಗತಿಯೊಳಗೆ ನಿದ್ರೆಗೆ ಜಾರಿದ ೧ನೇ ಕ್ಲಾಸಿನ ವಿದ್ಯಾರ್ಥಿ, ಶಾಲೆಗೆ ಬೀಗ ಹಾಕಿ ಮನೆ ಕಡೆ ಹೆಜ್ಜೆ ಹಾಕಿದ ಶಿಕ್ಷಕ.. ಮುಂದೇನಾಯ್ತು?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget