Uncategorized

UPSC ಫಲಿತಾಂಶ: ಶ್ರುತಿ ಶರ್ಮಾ ಟಾಪರ್, ರಾಜ್ಯದ 27 ಜನ ಆಯ್ಕೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ)ದ 2021ನೇ ಸಾಲಿನ ನಾಗರಿಕ ಸೇವೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.

ಶೃತಿ ಶರ್ಮಾ ಮೊದಲ ಶ್ರೇಯಾಂಕ ಪಡೆದಿದ್ದಾರೆ. ಅಂಕಿತಾ ಅಗರ್ವಾಲ್, ಗಾಮಿನಿ ಸಿಂಗ್ಲಾ ಕ್ರಮವಾಗಿ ಎರಡು ಮತ್ತು ಮೂರನೇ ಶ್ರೇಯಾಂಕ ಪಡೆದಿದ್ದಾರೆ ಎಂದು ಯುಪಿಎಸ್ ಸಿ ಪ್ರಕಟಣೆ ತಿಳಿಸಿದೆ. ಒಟ್ಟು 685 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ವಿವಿಧ ನಾಗರಿಕ ಸೇವೆಗಳಿಗೆ ಸೇರ್ಪಡೆ ಆಗಲಿದ್ದಾರೆ.

ಕರ್ನಾಟಕದಿಂದ 27 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಇವರಲ್ಲಿ ಅವಿನಾಶ್ ಬಿ. 31ನೇ ಶ್ರೇಯಾಂಕ  ಪಡೆದಿದ್ದಾರೆ. ಇಂಡಿಯಾ ಫಾರ್ ಐಎಎಸ್ ಅಕಾಡೆಮಿಯಿಂದ ತರಬೇತಿ ಪಡೆದ 19 ಮಂದಿ ಅಭ್ಯರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆದಿದ್ದಾರೆ ಎಂದು ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ರಾಮಮಂದಿರಕ್ಕೆ ಮೊದಲ ದಿನವೇ 5 ಲಕ್ಷ ಜನ ಭೇಟಿ..!ಎಷ್ಟು ಕೋಟಿ ರೂ. ಆದಾಯವಾಗಿದೆ? ಇಲ್ಲಿದೆ ಮಾಹಿತಿ

ರಾಘವೇಂದ್ರ ಮಠಕ್ಕೆ ಭೇಟಿ ನೀಡಿದ ಬ್ರಿಟನ್ ಮಾಜಿ ಪ್ರಧಾನಿ, ಕುಟುಂಬ ಸಮೇತ ಬೆಂಗಳೂರಿಗೆ ಆಗಮನ

ಇಂದು ಸಿಬಿಎಸ್ ಸಿ 10 ನೇ ತರಗತಿ ಫಲಿತಾಂಶ ಪ್ರಕಟ