ನ್ಯೂಸ್ ನಾಟೌಟ್: ಹೆರಿಗೆಗೆ ಶಸ್ತ್ರಚಿಕಿತ್ಸೆ ಮಾಡುವಾಗ ಹತ್ತಿಯನ್ನು ಹೊಟ್ಟೆಯಲ್ಲಿಯೇ ಬಿಟ್ಟಿದ್ದ ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿಯೋರ್ವರು ಸಾವನ್ನಪ್ಪಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.ಇಂದು ಉತ್ತರ ಪ್ರದೇಶದ ಬಂಗಾರ್ಮೌ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು , ಆಸ್ಪತ್ರೆ ಸಿಬ್ಬಂದಿ ಆಕೆಯ ಹೆರಿಗೆ ನೋವನ್ನು ನಿರ್ಲಕ್ಷಿಸಿದ್ದಾರೆ ಮತ್ತು ಅವರು ದೂರು ನೀಡಿದಾಗ ಆಕೆಗೆ ಹೊಡೆದಿದ್ದಾರೆ ಎಂದು ಮೃತರ ಕುಟುಂಬ ಆರೋಪಿಸಿದೆ.
ಗರ್ಭಿಣಿ ತನ್ನ ಡೆಲಿವರಿಗಾಗಿ ಉತ್ತರ ಪ್ರದೇಶದ ಬಂಗಾರ್ಮೌ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಆಕೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಮೃತರ ಕುಟುಂಬದ ಸದಸ್ಯರು ಆಸ್ಪತ್ರೆ ಸಿಬ್ಬಂದಿ ಆಕೆಯ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಮತ್ತು ಆಕೆಯ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಗೆ ಸರಿಯಾದ ವೈದ್ಯಕೀಯ ಆರೈಕೆ ಸಿಗದೇ ಈ ಪರಿಸ್ಥಿತಿ ನಿರ್ಮಾಣವಾಗಿದೆ.ಆಕೆಗೆ ತೀವ್ರ ಹೆರಿಗೆ ನೋವು ಶುರುವಾದಾಗ ವೈದ್ಯರು ಮತ್ತು ನರ್ಸ್ ಆಕೆಯ ನೋವನ್ನು ನಿರ್ಲಕ್ಷಿಸಿದ್ದಲ್ಲದೇ, ಆಕೆಯ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ. “ವೈದ್ಯಕೀಯ ಸಿಬ್ಬಂದಿ ಆಕೆಯ ಕೂದಲನ್ನು ಹಿಡಿದಿದ್ದು, ಆಕೆ ನೋವಾಗುತ್ತಿದೆ ಎಂದು ಹೇಳಿದಾಗ ಆಕೆಗೆ ಹೊಡೆದಿದ್ದಾರೆ” ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿದ್ದರೆ ಆಕೆಯ ಜೀವವನ್ನಾದರೂ ಉಳಿಸಬಹುದಿತ್ತು ಎಂದು ಆರೋಪಿಸಿದ್ದಾರೆ.
ಆಪರೇಷನ್ ವೇಳೆ ಆಕೆಯ ಹೊಟ್ಟೆಯಲ್ಲಿ ಹತ್ತಿ ಮತ್ತು ಬ್ಯಾಂಡೇಜ್ ಗಳನ್ನು ಬಿಟ್ಟು, ಆಕೆಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆಕೆಯ ಕುಟುಂಬದವರು ಹೇಳಿದ್ದಾರೆ. ಆಕೆಯ ಸ್ಥಿತಿ ಹದಗೆಟ್ಟಾಗ, ವೈದ್ಯರು ಆಕೆಯನ್ನು ಲಕ್ನೋದ ಆಸ್ಪತ್ರೆಗೆ ಕಳುಹಿಸಲು ನಿರ್ಧರಿಸಿದರು. ಆದರೆ, ಆಕೆಯನ್ನು ಸಾಗಿಸುವಾಗ ನಿಧನರಾದರು. ಹೆರಿಗೆಯಾಗುವ ಮೊದಲೇ ಆಕೆ ಮತ್ತು ಮಗು ಮೃತಪಟ್ಟಿದೆ ಎಂದು ಕುಟುಂಬ ಸದಸ್ಯರ ಆರೋಪ . ಆಕೆಯ ಕುಟುಂಬದ ಗಂಭೀರ ಆರೋಪಗಳ ನಂತರ ಬಂಗಾರ್ಮೌ ಪೊಲೀಸರು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ. ದೈನಿಕ್ ಭಾಸ್ಕರ್ ವರದಿಯ ಪ್ರಕಾರ, ಮರಣೋತ್ತರ ಪರೀಕ್ಷೆಯ ವರದಿ ಬಿಡುಗಡೆಯಾದ ನಂತರ ಸಾವಿಗೆ ನಿಖರವಾದ ಕಾರಣವನ್ನು ನಿರ್ಧರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆ ಆಸ್ಪತ್ರೆ ಆಡಳಿತವು ಎಲ್ಲಾ ಆರೋಪಗಳನ್ನು ನಿರಾಕರಿಸಿದೆ, ಅವುಗಳನ್ನು ಆಧಾರರಹಿತವೆಂದು ತಳ್ಳಿಹಾಕಿದೆ.