ಕ್ರೈಂವೈರಲ್ ನ್ಯೂಸ್

ವಿಟ್ಲ: ವಾಮಾಚಾರದ ಶಂಕೆ ! ಸಂಬಂಧಿಕರ ಮನೆಯಲ್ಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ !

272

ನ್ಯೂಸ್ ನಾಟೌಟ್: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸಂಬಂಧಿಕರ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಭಾನುವಾರ ಮಾ.19 ರಂದು ಸಂಜೆ ನಡೆದಿದೆ.

ವಿಟ್ಲ ಕನ್ಯಾನ ನಿವಾಸಿಯಾದ ಹರೀಶ್ (33) 10 ವರ್ಷಗಳಿಂದ ಮುಡಿಪುವಿನ ಇನ್ಫೋಸಿಸ್ ಸಂಸ್ಥೆಯಲ್ಲಿ ಗಾರ್ಡನ್ ಕೆಲಸ ಮಾಡುತ್ತಿದ್ದರು. ನವವಿವಾಹಿತರಾಗಿದ್ದ ಹರೀಶ್ ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿಯಾಗಿದ್ದ ಯುವತಿಯನ್ನು ವಿವಾಹವಾಗಿದ್ದರು.

ಹರೀಶ್ ಮಾ.12 ರಂದು ತಾಯಿಯ ಅಕ್ಕನ ಮಗನಾಗಿರುವ ಕೊಣಾಜೆ ಮುಚ್ಚಿಲಕೋಡಿ ನಿವಾಸಿ ರಮೇಶ್ ಶೆಟ್ಟಿಗಾರ್ ಎಂಬವರಿಗೆ ಕರೆ ಮಾಡಿ ತನ್ನ ಬ್ಯಾಗಿನಲ್ಲಿ ಭಸ್ಮ, ತಗಡು ದೊರೆತಿದ್ದು, ವಾಮಾಚಾರ ಮಾಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಮೇಶ್ ಮನೆ ಬಳಿ ಬಂದು ಮಾತನಾಡುವ ಎಂದು ಹೇಳಿದ್ದರು ಎನ್ನಲಾಗಿದೆ.

ಮಾ.19 ಭಾನುವಾರ ಕೈಯಲ್ಲಿ ಪೆಟ್ರೋಲ್ ಅನ್ನು ಕ್ಯಾನಿನಲ್ಲಿ ಹಿಡಿದುಕೊಂಡೇ ರಮೇಶ್ ಮನೆಗೆ ಬಂದರು. ಮಾತುಕತೆ ಆರಂಭವಾಗುವ ಮುನ್ನವೇ ಅಂಗಳದಲ್ಲಿ ಮೈಪೂರ್ತಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ. ಕೂಡಲೇ ಮನೆಯವರು ಕೊಣಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹರೀಶ್ ಸಾವನ್ನಪ್ಪಿದ್ದಾರೆ. ಅರೆಬೆಂದ ಸ್ಥಿತಿಯಲ್ಲಿದ್ದ ಹರೀಶ್ ಖುದ್ದಾಗಿ ಆಂಬ್ಯುಲೆನ್ಸ್ ಹತ್ತಿದ್ದರು.

ರಮೇಶ್ ಶೆಟ್ಟಿಗಾರ್ ಹರೀಶ್ ಅವರ ಸಹೋದರನಾಗಿದ್ದು, ಹರೀಶ್ ಅವರ ಪತ್ನಿ ಚಿಕ್ಕಮ್ಮನ ಮಗಳಾಗಿದ್ದಳು ಎಂದು ಮಾಹಿತಿ ದೊರೆತಿದೆ. ಸಂಬಂಧದ ಒಳಗಡೆ ಇಬ್ಬರಿಗೂ ವಿವಾಹ ನಡೆದಿತ್ತು. ಪತ್ನಿಯು ತನ್ನ ಜೊತೆ ಸರಿಯಾಗಿ ಮಾತನಾಡುವುದಿಲ್ಲ, ಕಿವಿ ಕೇಳದಂತೆ ವರ್ತಿಸುತ್ತಾಳೆ ಎಂದು ಹರೀಶ್ ಆರೋಪ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಇವರಿಗೆ ಆರ್ಥಿಕವಾಗಿ ಯಾವುದೇ ರೀತಿಯ ಸಂಕಷ್ಟ ಇರಲಿಲ್ಲ. ಇದೀಗ ಹರೀಶ್ ಪತ್ನಿ 7 ತಿಂಗಳ ಗರ್ಭಿಣಿಯಾಗಿದ್ದಾಳೆ. ಇದೇ ತಿಂಗಳ ಒಳಗೆ ಪತ್ನಿಗೆ ಸೀಮಂತ ಮಾಡುವ ತಯಾರಿ ಇತ್ತು ಎಂದು ತಿಳಿದುಬಂದಿದೆ.

See also  ವಿವಿ ಕಾಲೇಜಿನ ತರಗತಿ ಗೋಡೆಗಳಿಗೆ ಹಸುವಿನ ಸೆಗಣಿ ಲೇಪಿಸಿದ ಪ್ರಾಂಶುಪಾಲೆ..! ವಿಡಿಯೋ ವೈರಲ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget