ಕ್ರೈಂ

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ಪತ್ತೆ, ಕೊಲೆಯೆಂಬ ಶಂಕೆ, ತನಿಖೆಗೆ ಒತ್ತಾಯ

237

ನ್ಯೂಸ್ ನಾಟೌಟ್: ಕಾಂಗ್ರೆಸ್ ಕಾರ್ಯಕರ್ತನ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೈದಿರಬೇಕೆಂದು ಶಂಕಿಸಲಾಗಿದೆ. ಇದು ಕೊಲೆಯಾಗಿರಬೇಕೆಂಬ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆಯಾಗಬೇಕೆಂದು ಒತ್ತಾಯಿಸಲಾಗಿದೆ. ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ (ಸೇವಂತ) ಮೃತಪಟ್ಟವರೆಂದು ತಿಳಿದು ಬಂದಿದೆ.

ಕಾಂಗ್ರೆಸ್ ಕಾರ್ಯಕರ್ತ

ಪದ್ಮನಾಭ ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾಗಿದ್ದರು. ಮಾಹಿತಿ ಹಕ್ಕು (ಆರ್‌ಟಿಐ)ಮೂಲಕ ಮಾಹಿತಿ ಪಡೆದು ಸಾಮಾಜಿಕ ಜಾಲತಾಣದಲ್ಲಿ  ಹರಿಯಬಿಡುತ್ತಿದ್ದರು. ಆದರೆ ಇತ್ತೀಚೆಗೆ ಅವರ ಮೇಲೆಯೇ ವಂಚನೆ ಆರೋಪ ಕೇಳಿಬಂದಿತ್ತು. ಯುವಕನೋರ್ವನಿಗೆ ಸರಕಾರಿ ಉದ್ಯೋಗ ದೊರಕಿಸಿಕೊಡುವುದಾಗಿ 1.50 ಲಕ್ಷ ರೂ. ಹಣವನ್ನು ಪಡೆದುಕೊಂಡು ವಂಚಿಸಿದ್ದ ಎಂದು ಯುವಕ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಈ ಕುರಿತು ಪದ್ಮನಾಭ ಸಾಮಂತ ವಿಚಾರಣೆಗೆ ಹಾಜರಾಗುವುದಾಗಿ ಪೊಲೀಸರ ಬಳಿ ಹೇಳಿಕೊಂಡಿದ್ದು,ಆದರೆ ಕಳೆದ ಮೂರು ದಿನಗಳಿಂದ ಠಾಣೆಗೆ ಹಾಜರಾಗಿರಲಿಲ್ಲ. ದೂರವಾಣಿ ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪದ್ಮನಾಭ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು, ಮೃತಪಟ್ಟು ಕೆಲವು ದಿನಗಳು ಕಳೆದಿರುವ ಹಿನ್ನೆಲೆ ಮರಣೋತ್ತರ ಪರೀಕ್ಷೆಗಾಗಿ ಫೋರೆನ್ಸಿಕ್ ತಜ್ಞರು ಆಗಮಿಸಬೇಕಾಗಿದೆ.

See also  ಕಾಸರಗೋಡು: ವಿವಾಹ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget