ಕರಾವಳಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಶಾಸಕ ಸುನಿಲ್ ಕುಮಾರ್

ನ್ಯೂಸ್ ನಾಟೌಟ್‌: ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ಧಾರ ಸಮಿತಿ, ಕಾರ್ಕಳ ಪುರಸಭೆ ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ರಾಮಸಮುದ್ರ ಬಳಿಯ ತೋಟಗಾರಿಕೆ ವಠಾರದಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮ ಭಾನುವಾರ (ಜು.9) ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ವಿ.ಸುನಿಲ್ ಕುಮಾರ್, ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ದೇವಳಕ್ಕೆ ಬಳಸಿದ ಮರಗಳ ಬದಲಾಗಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಣೆ ಮಾಡಬೇಕೆನ್ನುವ ಉದ್ದೇಶದಿಂದ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅರಣ್ಯ ಉಳಿಸುವ ಜತೆಗೆ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಗಿಡಗಳನ್ನು ನೆಟ್ಟು ಸಂರಕ್ಷಿಸಬೇಕೆಂದು ಕರೆ ನೀಡಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ನಿಟ್ಟೆ, ವಲಯ ಅರಣ್ಯಾಧಿಕಾರಿ ಜಿ.ಡಿ ದಿನೇಶ್, ಉಪ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ರೂಪಾ ಶೆಟ್ಟಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಗುರುದತ್ ಎನ್., ಉದ್ಯಮಿ ಸುಜಯ ಶೆಟ್ಟಿ, ವಿಜಯ ಶೆಟ್ಟಿ, ನವೀನ್ ನಾಯಕ್ ಮತ್ತಿತರರಿದ್ದರು.

Related posts

Raksha Bandhan | ಸೈನಿಕರಿಗಾಗಿ ವಿಶೇಷ ರಾಖಿ ತಯಾರಿಸಿದ ಮುಸ್ಲಿಂ ಯುವತಿಯರು, ಅಂತಾರಾಷ್ಟ್ರೀಯ ಗಡಿ ಸೇರಿದಂತೆ ವಿವಿಧ ಕಡೆಯಲ್ಲಿ ಯೋಧರಿಗೆ ರಾಖಿ ಕಟ್ಟಿ ಮಹಿಳೆಯರ ಸಂಭ್ರಮ, ವಿಡಿಯೋ ವೀಕ್ಷಿಸಿ

ಫೆ.12ರಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ದುರ್ಗಾವಾಹಿನಿ ಸುಳ್ಯ ಪ್ರಖಂಡ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಗೋಕರ್ಣದಲ್ಲಿ ಕುಮಾರಸ್ವಾಮಿಗೆ ಬಿಸಿಮುಟ್ಟಿಸಿದ ಅರ್ಚಕರು !