Latestಕ್ರೈಂಬೆಂಗಳೂರುವೈರಲ್ ನ್ಯೂಸ್

ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಬೆಂಗಳೂರಿನ ಯುವಕ ಅರೆಸ್ಟ್..! ಆತನ ವಿಡಿಯೋದಲ್ಲೇನಿತ್ತು..?

751

ನ್ಯೂಸ್‌ ನಾಟೌಟ್‌: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆಯ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ್ದ ಯುವಕನನ್ನು ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಆರೋಪಿ ನವಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸದ್ಯ ಆತನನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ.

“ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧದ ಕಾರಣ, ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಯಾಕೆ ಪಾಕಿಸ್ತಾನ ಬಾಂಬ್ ಹಾಕಿಲ್ಲ? ಜನರೆಲ್ಲ ಸುಮ್ಮನೆ ನೆಮ್ಮದಿಯಿಂದ ಇರುವಾಗ ಈ ಪರಿಸ್ಥಿತಿ ಸೃಷ್ಟಿಸಿದ್ದು ಮೋದಿ. ಮೊದಲು ಮೋದಿ ಮನೆ ಮೇಲೆ ಬಾಂಬ್ ಹಾಕಬೇಕು” ಎಂದು ವೈರಲ್ ವಿಡಿಯೋದಲ್ಲಿ ನವಾಜ್ ಹೇಳಿದ್ದಾನೆ ಎನ್ನಲಾಗಿದೆ.

ಪಬ್ಲಿಕ್ ಸರ್ವೆಂಟ್ ಐಡಿಯಲ್ಲಿ ನವಾಜ್ ವಿಡಿಯೋ ವೈರಲ್ ಮಾಡಿದ್ದ. ಇದನ್ನು ಆಧರಿಸಿ ಬಂಡೆಪಾಳ್ಯ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.

ಕೆಲವೇ ದಿನಗಳ ಹಿಂದಷ್ಟೇ ಉಡುಪಿ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಪಾಕಿಸ್ತಾನದ ಪರ ಸಂದೇಶಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿರುವುದು ಬೆಳಕಿಗೆ ಬಂದಿತ್ತು. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದ ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದರು. ಇದೀಗ ಬೆಂಗಳೂರಿನಲ್ಲಿ ಮೋದಿ ವಿರುದ್ಧ ಪ್ರಚೋದನಕಾರಿ ವಿಡಿಯೋ ವೈರಲ್ ಆಗಿದೆ.

ಬ್ರೇಕಪ್ ಮಾಡಿಕೊಂಡನೆಂದು ಆತನ ಕೈ ಬೆರಳನ್ನೇ ಕತ್ತರಿಸಿ ಫ್ರಿಜ್ ನಲ್ಲಿಟ್ಟ ಯುವತಿ..! ಎನಿದು ವಿಚಿತ್ರ ಘಟನೆ..?

See also  ಧಾರವಾಡದಲ್ಲೂ ವಿದ್ಯಾರ್ಥಿಯ ಜನಿವಾರಕ್ಕೆ ಕತ್ತರಿ ಪ್ರಯೋಗ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget