ನ್ಯೂಸ್ ನಾಟೌಟ್: ಕಿಂಗ್ ಫಿಷರ್ ಏರ್ ಲೈನ್ಸ್ ನ ಕಂಪನಿಗಳಿಂದ ಬ್ಯಾಂಕ್ ಗಳು ವಸೂಲಿ ಮಾಡಿರುವ ಹಣ ಮತ್ತು ಆಸ್ತಿಗಳ ಲೆಕ್ಕ ಕೋರಿ ಹೈಕೋರ್ಟ್ ಗೆ ವಿಜಯ್ ಮಲ್ಯ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ, ಬ್ಯಾಂಕ್ ಗಳು, ಸಾಲ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ವಿಜಯ್ ಮಲ್ಯ ಪರ ಹಿರಿಯ ವಕೀಲ ಸಾಜನ್ ಪೂವಯ್ಯ ವಾದಿಸಿ, 6200 ಕೋಟಿ ಸಾಲ ಕೊಡಬೇಕಿತ್ತು. 14,000 ಕೋಟಿ ವಸೂಲು ಮಾಡಲಾಗಿದೆ ಎಂದು ಹಣಕಾಸು ಸಚಿವೆ ಲೋಕಸಭೆಗೆ ತಿಳಿಸಿದ್ದಾರೆ. ಸಾಲ ವಸೂಲಾತಿ ಅಧಿಕಾರಿ 10,200 ಕೋಟಿ ವಸೂಲಾಗಿದೆ ಎಂದಿದ್ದಾರೆ.
ಸಂಪೂರ್ಣ ಸಾಲ ತೀರಿದ್ದರೂ ಈಗಲೂ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ. ಹೀಗಾಗಿ ಸಾಲ ವಸೂಲಿಯಾದ ಲೆಕ್ಕಪತ್ರ ನೀಡುವಂತೆ ನಿರ್ದೇಶಿಸಲು ಮನವಿ ಮಾಡಿದ್ದಾರೆ. ವಾದ ಆಲಿಸಿದ ಪೀಠ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.
Click
ಗಡಿಪಾರು ಮಾಡಲಾದ 205 ಭಾರತೀಯರನ್ನು ಭಾರತಕ್ಕೆ ಕರೆತರಲಿರುವ ಅಮೆರಿಕದ ಮಿಲಿಟರಿ ವಿಮಾನ..! ಇಲ್ಲಿದೆ ಸಂಪೂರ್ಣ ಮಾಹಿತಿ
ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ..! ಬೈಕ್ ಸವಾರ ಸಾವು..!
ರಾಹುಲ್ ದ್ರಾವಿಡ್ ಕಾರಿಗೆ ಗುದ್ದಿದ ಗೂಡ್ಸ್ ಆಟೋ..! ದೂರು ನೀಡದ ಟೀಂ ಇಂಡಿಯಾದ ಮಾಜಿ ಕೋಚ್..!
ವಿಶ್ವದ ಪ್ರಭಾವಿ ರಾಷ್ಟ್ರಗಳ ಪಟ್ಟಿ ಬಿಡುಗಡೆ..! ಭಾರತಕ್ಕೆ ಎಷ್ಟನೇ ಸ್ಥಾನ..?
ಮಹಾ ಕುಂಭಮೇಳದಲ್ಲಿ ನರೇಂದ್ರ ಮೋದಿ ಪುಣ್ಯಸ್ನಾನ, ಸಂತರೊಂದಿಗೆ ಚರ್ಚಿಸಲಿರುವ ಪ್ರಧಾನಿ