ಕ್ರೀಡೆ/ಸಿನಿಮಾಕ್ರೈಂದೇಶ-ಪ್ರಪಂಚದೇಶ-ವಿದೇಶರಾಜ್ಯವೈರಲ್ ನ್ಯೂಸ್ಸಿನಿಮಾ

Vijaya Lakshmi Darshan: ಪ್ರೊಫೈಲ್ ಫೋಟೋ ತೆಗೆದು ಹಾಕಿ ದರ್ಶನ್ ನನ್ನು ಅನ್ ಫಾಲೋ ಮಾಡಿದ ಪತ್ನಿ ವಿಜಯಲಕ್ಷ್ಮೀ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕಿಡ್ನಾಪ್ ಮತ್ತು ಭೀಕರ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ದರ್ಶನ್‌, ಆತನ ಪ್ರೇಯಸಿ ಪವಿತ್ರಾ ಗೌಡ ಹಾಗೂ 11 ಮಂದಿ ಸಹಚರರನ್ನು ಬೆಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಇನ್​ಸ್ಟಾಗ್ರಾಮ್ ನಲ್ಲಿ ದರ್ಶನ್ ನನ್ನು ಅನ್ ಫಾಲೋ ಮಾಡಿದ್ದಾರೆ.

ದರ್ಶನ್‌ ಬಂಧನದ ಬೆನ್ನಲ್ಲೇ ಚಿತ್ರರಂಗ ಸೇರಿ ಕೊಲೆಯಾದ ರೇಣುಕಾಸ್ವಾಮಿ ಕುಟುಂಬ ತೀವ್ರ ತಲ್ಲಣ ಗೊಂಡಿದ್ದು, ಈ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಮತ್ತು ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಎನ್ನಲಾಗಿದೆ. ಇನ್​ಸ್ಟಾಗ್ರಾಮ್ ಪ್ರೊಫೈಲ್ ಫೋಟೋ ತೆಗೆದು ಹಾಕಿರುವುದು ಮಾತ್ರವಲ್ಲದೆ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ.

ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ನಟ ದರ್ಶನ್‌, ಪ್ರೇಯಸಿ ಪವಿತ್ರಾ ಗೌಡ ಮತ್ತು ಸಹಚರರಾದ ವಿನಯ್‌, ಆರ್‌. ನಾಗರಾಜ್‌, ಎಂ. ಲಕ್ಷ್ಮಣ್‌, ಪ್ರದೋಷ್‌, ಪವನ್‌, ದೀಪಕ್‌ ಕುಮಾರ್‌, ನಂದೀಶ್‌, ಕಾರ್ತಿಕ್‌, ನಿಖೀಲ್‌, ರಾಘವೇಂದ್ರ, ಕೇಶವ ಮೂರ್ತಿ ಅವರನ್ನು ಬಂಧಿಸಲಾಗಿದೆ. ಸಾಮಾನ್ಯ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿರುವ ಖ್ಯಾತ ಸಿನಿಮಾ ನಟ ದರ್ಶನ್ ಅವರನ್ನು ನ್ಯಾಯಾಲಯ ಮುಂದಿನ 7 ದಿನಗಳ ತನಕ ಪೊಲೀಸ್ ಕಸ್ಟಡಿಗೆ ನೀಡಿದೆ. ಜೂ.11 ನ್ಯಾಯಾಲಯಕ್ಕೆ ದರ್ಶನ್ ಮತ್ತು ಟೀಂ ಅನ್ನು ಹಾಜರುಪಡಿಸಲಾಗಿತ್ತು.

Click 👇

https://newsnotout.com/2024/06/darshan-and-gang-plan
https://newsnotout.com/2024/06/anupam-agarwal-reacts-on-mangaluru-vijayothsava-issue

Related posts

ಬಸ್‌ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಮೇಲೆ ನುಗ್ಗಿದ ಬಸ್..! ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ..!

ಚಾರ್ಜ್ ಶೀಟ್ ನಲ್ಲಿರೊ ಮಾಹಿತಿಯನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಕರಿಯ, ದರ್ಶನ್ ಕ್ರೌರ್ಯ ಪ್ರಸಾರಕ್ಕೆ ತಡೆ ಬೀಳಬಹುದೆ..?

14 ಮತ್ತು 12 ವರ್ಷದ ವಿದ್ಯಾರ್ಥಿಗಳ ನಡುವೆ ಹೊಡೆದಾಟ..! 14 ವರ್ಷದ ಬಾಲಕ ಸಾವು..!