ಕ್ರೈಂಬೆಂಗಳೂರುರಾಜಕೀಯವೈರಲ್ ನ್ಯೂಸ್

ವಿಜಯೇಂದ್ರ ನೀನು ಬಚ್ಚಾ, ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದ ರಮೇಶ್‌ ಜಾರಕಿಹೊಳಿ..! ಸ್ವಪಕ್ಷೀಯರಲ್ಲಿ ತೀವ್ರಗೊಂಡ ಬಣ ಬಡಿದಾಟ, ಏಕವಚನದಲ್ಲೇ ವಾಗ್ದಾಳಿ..!

216

ನ್ಯೂಸ್ ನಾಟೌಟ್ : ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸ್ವಪಕ್ಷದ ನಾಯಕನ ಬಗ್ಗೆ ಏಕವಚನದಲ್ಲೇ ವಿಜಯೇಂದ್ರ ವಿರುದ್ಧ ಹೇಳಿಕೆ ನೀಡಿದ್ದಾರೆ.

ಗೋಕಾಕ್‌ ನ ಅಂಕಲಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ, ನಮ್ಮ ಪಕ್ಷದಲ್ಲಿ ಜಗಳ ಇದೆ. ಅದು ಕೇವಲ‌ ಅಧ್ಯಕ್ಷ ಸ್ಥಾನ ಬದಲಾವಣೆಗಾಗಿ ಮಾತ್ರ. ಅಧ್ಯಕ್ಷ ಸ್ಥಾನ ಬದಲಾವಣೆಗೆ ಆಗದಿದ್ದರೂ ಪಕ್ಷ ಸಂಘಟನೆ ಮಾಡುತ್ತೇವೆ ಎಂದರು.

ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ, ‌ಇಂದಿಗೂ ಯಡಿಯೂರಪ್ಪನವರು ನಮ್ಮ ನಾಯಕ. ನಾನು ಅವರ ಮೇಲೆ ಅಗೌರವದಿಂದ ಮಾತನಾಡಿಲ್ಲ. ಆದರೆ ನೀನು ಸುಳ್ಳು ಹೇಳುವುದನ್ನು ಬಿಡು. ನಾನು ಶಿಕಾರಿಪುರಕ್ಕೆ ಬರುತ್ತೇನೆ. ನಿನ್ನ ಮನೆಯ ಮುಂದೆಯಿಂದಲೇ ಪ್ರವಾಸ ಶುರು ಮಾಡುತ್ತೇನೆ. ನೀನು ದಿನಾಂಕ ನಿಗದಿ ಮಾಡು. ಬೆಂಬಲಿಗರು ಬರಲ್ಲ ಗನ್ ಮ್ಯಾನ್ ಬರಲ್ಲ, ನಾನೊಬ್ಬನೇ ಬರುತ್ತೇನೆ. ಅಲ್ಲಿಂದಲೇ ಪ್ರವಾಸ ಶುರು ಮಾಡುತ್ತೇನೆ ತಡಿ ನೋಡೊಣ ಎಂದು ಸವಾಲೆಸೆದರು.

ನನ್ನನ್ನು ರಾಜ್ಯದಲ್ಲಿ ಓಡಾಡದ ಹಾಗೆ ಮಾಡುವ ಶಕ್ತಿ ನನಗಿದೆ ಎಂದು ಗುಡುಗಿದ ಜಾರಕಿಹೊಳಿ, ನಿನ್ನಂತ ಕೀಳು ಮಟ್ಟದ ರಾಜಕೀಯ ಮಾಡಲು ನನಗೆ ಬರಲ್ಲ. ವಿಜಯೇಂದ್ರ ಬಗ್ಗೆ ಗೌರವ ಇಲ್ಲ. ಅಧ್ಯಕ್ಷ ಸ್ಥಾನದ ಮೇಲೆ ಮಾತ್ರ ಗೌರವ ಇದೆ. ಅವರನ್ನ ಬದಲಿಸಿ ಹೊಸಬರಿಗೆ ಅವಕಾಶ ನೀಡಲಿ. ಯಡಿಯೂರಪ್ಪನವರೇ ಇನ್ನು‌ ನೀವು ಸಿಎಂ ಆಗಲ್ಲ ಪದೇ ಪದೇ ಸೈಕಲ್ ಮೇಲೆ ಓಡಾಡಿದ್ದೀನಿ ಎಂದು ಹೇಳಬೇಡಿ ಅದರ ಎರಡು ಪಟ್ಟು ಲಾಭ ಪಡೆದುಕೊಂಡಿದ್ದಿರಿ ಎಂದರು.

Click

https://newsnotout.com/2025/01/kannada-news-teatment-to-dog-kannada-news-viral-news/
https://newsnotout.com/2025/01/atm-scam-kananda-news-ban-depositer-viral-news/
https://newsnotout.com/2025/01/bengaluru-kannada-news-air-show-in-yalahanka-jan-to-feb/
https://newsnotout.com/2025/01/kolkatta-doctor-case-kannada-news-sanjay-roy-court-issue/
See also  ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಶಿಕ್ಷಕಿಗೆ ಹೃದಯಾಘಾತ..! ಕೊನೆಯುಸಿರೆಳೆದ ಶಿಕ್ಷಕಿ ಬಗ್ಗೆ ಚುನಾವಣಾಧಿಕಾರಿ ಹೇಳಿದ್ದೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget