ಉಡುಪಿಕರಾವಳಿಕ್ರೈಂ

ಉಡುಪಿ: ಕೂಡಲೇ ಶರಣಾಗಿ ಇಲ್ಲದಿದ್ರೆ ಕಾರ್ಯಾಚರಣೆ ತೀವ್ರಗೊಳಿಸ್ತೇವೆ ಎಂದು ಕಾಡಲ್ಲಿ ಅವಿತಿರುವ ನಕ್ಸಲರಿಗೆ ಡಿಜಿಪಿ ಎಚ್ಚರಿಕೆ..! ವಿಕ್ರಂ ಗೌಡ ಎನ್‌ ಕೌಂಟರ್ ಬಳಿಕ ಚುರುಕುಗೊಂಡ ಕಾರ್ಯಾಚರಣೆ..!

209

ನ್ಯೂಸ್ ನಾಟೌಟ್ : ಶರಣಾಗತಿಯೊಂದೇ ನಿಮಗಿರುವ ದಾರಿ ಎಂಬ ಸಂದೇಶವನ್ನು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ (DGP Pranab Mohanty) ಅವರು ಕಾಡಿನಲ್ಲಿ ಅವಿತಿರುವ ನಕ್ಸಲರಿಗೆ ರವಾನಿಸಿದ್ದಾರೆ.

ಎನ್‌ ಕೌಂಟರ್ ಸ್ಥಳಕ್ಕೆ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ಭೇಟಿ ನೀಡಿ, ಘಟನೆ ಬಗ್ಗೆ ಪೂರ್ಣ ಮಾಹಿತಿ ಪಡೆದರು. ಶರಣಾಗತಿಯೊಂದೇ ನಿಮಗಿರುವ ಒಂದೇ ಒಂದು ದಾರಿ. ಶರಣಾಗದಿದ್ದರೆ ಕಾರ್ಯಾಚರಣೆ ಹೊರತು ನಮಗೆ ಬೇರೆ ದಾರಿಯಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಡಿಜಿಪಿ ಭೇಟಿ ಬೆನ್ನಲ್ಲೇ ಕೂಂಬಿಂಗ್ ಚುರುಕುಗೊಂಡಿದೆ. ಪೀತಬೈಲ್, ಕಬ್ಬಿನಾಲೆ ಬಚ್ಚಪ್ಪು ಪರಿಸರದಲ್ಲಿ ಓಡಾಟ ನಡೆಸಿ ಎ.ಎನ್‌.ಎಫ್ ಕ್ಯಾಂಪ್‌ ಗೆ ಭೇಟಿಕೊಟ್ಟು ಸೂಚನೆ ನೀಡಿದ್ದಾರೆ.

ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ ಎನ್‌ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬಿನಾಲೆ ಅರಣ್ಯ ಪ್ರದೇಶ ವ್ಯಾಪ್ತಿಯ ಪೀತಬೈಲು ಘಟನಾ ಸ್ಥಳದಲ್ಲಿ ದಾಖಲೆ ಸಂಗ್ರಹ ಮಾಡುವ ಸಲುವಾಗಿ ಎ.ಎನ್‌.ಎಫ್ ಬೆಂಗಳೂರಿನಿಂದ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್‌ಎಸ್‌ಎಲ್) ಅಧಿಕಾರಿಗಳನ್ನು ಕರೆಸಿಕೊಂಡಿದೆ.

Click

https://newsnotout.com/2024/11/vitla-kannada-news-panjigadde-nomore-kannada-news-f/
See also  ಕುಡಿದು ವಾಹನ ಚಲಾಯಿಸಿ ಪೊಲೀಸರಿಗೆ ಪೆದಂಬು ಉತ್ತರ ಕೊಟ್ಟವನಿಗೆ ದಂಡ + ಪೊಲೀಸ್ ಠಾಣೆಯ ಆವರಣ ಸ್ವಚ್ಛಗೊಳಿಸುವ ಶಿಕ್ಷೆ..!, ಸುಳ್ಯ ನ್ಯಾಯಾಲಯದಿಂದ ವಿಶೇಷ ತೀರ್ಪು
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget