ಕ್ರೀಡೆಕ್ರೀಡೆ/ಸಿನಿಮಾವೈರಲ್ ನ್ಯೂಸ್

ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್‌..! ಅನರ್ಹ ಪ್ರಶ್ನಿಸಿ ಕ್ರೀಡಾ ನ್ಯಾಯ ಮಂಡಳಿಗೆ ಮೇಲ್ಮನವಿ ಸಲ್ಲಿಸಿದ ಫೋಗಟ್‌..!

228

ನ್ಯೂಸ್ ನಾಟೌಟ್: ಪ್ಯಾರಿಸ್ ಒಲಿಂಪಿಕ್ಸ್‌ ಕ್ರೀಡಾಕೂಟದ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ.

‘ಎಕ್ಸ್‌’ನಲ್ಲಿ ನಿವೃತ್ತಿ ಘೋಷಿಸಿ ಫೋಸ್ಟ್ ಮಾಡಿರುವ ಅವರು, ‘ನನ್ನ ವಿರುದ್ಧದ ಕುಸ್ತಿ ಗೆದ್ದಿದೆ, ನಾನು ಸೋತಿದ್ದೇನೆ. ನನ್ನನ್ನು ಕ್ಷಮಿಸಿ. ನಿಮ್ಮ ಕನಸು ಮತ್ತು ನನ್ನ ಧೈರ್ಯ ನುಚ್ಚುನೂರಾಗಿದೆ. ಈಗ ನನಗೆ ಹೆಚ್ಚಿನ ಶಕ್ತಿ ಇಲ್ಲ. ನನ್ನನ್ನು ಕ್ಷಮಿಸಿದ್ದಕ್ಕೆ ನಿಮ್ಮೆಲ್ಲರಿಗೂ ನಾನು ಋಣಿಯಾಗಿರುತ್ತೇನೆ’ ಎಂದು ಹೇಳಿದ್ದಾರೆ.
ಮಂಗಳವಾರ ನಡೆದ 50 ಕೆ.ಜಿ ವಿಭಾಗದ ಮಹಿಳೆಯರ ಫ್ರೀಸ್ಟೈಲ್ ಕುಸ್ತಿ ಸೆಮಿಫೈನಲ್‌ನಲ್ಲಿ ವಿನೇಶಾ ಕ್ಯೂಬಾದ ಯುಸೇನೆಯಲಿಸ್ ಗುಜ್ಮನ್ ಲೊಪೇಜ್ ಅವರನ್ನು ಸೋಲಿಸಿ ಫೈನಲ್‌ ತಲುಪಿದ್ದರು.

ಅಂದುಕೊಂಡಂತೆ ನಡೆದಿದ್ದರೆ ಬುಧವಾರ(ಆ.7) ರಾತ್ರಿ ಫೈನಲ್‌ನಲ್ಲಿ ಅಮೆರಿಕದ ಸೆರಾ ಹಿಲ್ದಿಬ್ರೇಟ್‌ ಅವರ ಎದುರು ವಿನೇಶಾ ಸೆಣಸಬೇಕಿತ್ತು. ಆದರೆ ನಿಗದಿಯ ದೇಹ ತೂಕಕ್ಕಿಂತ 100 ಗ್ರಾಂ ಹೆಚ್ಚು ತೂಕ ಹೊಂದಿದ ಕಾರಣ ಅವರು ಪಂದ್ಯದಿಂದಲೇ ಅನರ್ಹಗೊಳ್ಳಬೇಕಾಯಿತು.
ವಿನೇಶ್ ಫೋಗಟ್ ತಮ್ಮನ್ನು ಅನರ್ಹಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ ಕ್ರೀಡಾ ನ್ಯಾಯ ಮಂಡಳಿಗೆ ಮೇಲ್ಮನವಿ ಸಲ್ಲಿಸಿದ್ದಾರೆ. ತಮಗೆ ಜಂಟಿ ಬೆಳ್ಳಿ ಪದಕ ನೀಡಬೇಕು ಎಂದೂ ವಿನೇಶ್ ಬೇಡಿಕೆ ಸಲ್ಲಿಸಿದ್ದಾರೆ. ವಿನೇಶ್ ಅವರು ಮೇಲ್ಮನವಿ ಸಲ್ಲಿಸಿರುವುದನ್ನು ಐಒಎ (ಭಾರತ ಒಲಿಂಪಿಕ್ ಸಂಸ್ಥೆ)ಯ ಮೂಲಗಳು ಖಚಿತಪಡಿಸಿವೆ.

Click

https://newsnotout.com/2024/08/dog-droped-down-from-5-flood-baby-nomore-kannada-news/
https://newsnotout.com/2024/08/money-transfer-limit-increased-in-upi-kannada-news-riserve-bank/
https://newsnotout.com/2024/08/pm-modi-wayanad-entry-on-saturday-kannda-news-viral-news/
https://newsnotout.com/2024/08/final-vinesh-pogat-kannada-news-silver-state-govt-gave-4-crore-rupees/
See also  ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget