ಕ್ರೈಂದೇಶ-ಪ್ರಪಂಚವೈರಲ್ ನ್ಯೂಸ್

14 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕರಿಂದ ಅತ್ಯಾಚಾರ! ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ!

ನ್ಯೂಸ್‌ ನಾಟೌಟ್‌:  ಹರಿಯಾಣದ ಗುರುಗ್ರಾಮ್‌ನಲ್ಲಿ ಸರ್ಕಾರಿ ಶಾಲೆಯ 8 ನೇ ತರಗತಿಯಲ್ಲಿ ಓದುತ್ತಿರುವ 14 ವರ್ಷದ ಬಾಲಕಿಯನ್ನು ಮೂವರು ಅಪ್ರಾಪ್ತ ಹುಡುಗರು ಅಪಹರಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ಭಾನುವಾರ ಮಾರ್ಚ್ ೧೨ರಂದು ತಿಳಿಸಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎನ್ನುವುದು ವಿಚಿತ್ರ, ಡಿಸೆಂಬರ್ 2022 ರಲ್ಲಿ ಅಂತರ್ ಶಾಲಾ ಕ್ರೀಡಾಕೂಟದ ವೇಳೆ ಇಬ್ಬರು ವಿದ್ಯಾರ್ಥಿಗಳು ಮತ್ತು ಮತ್ತೊಬ್ಬ ವ್ಯಕ್ತಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಶಾಲೆಯ ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ.

ದೂರಿನ ಪ್ರಕಾರ, ಕೃತ್ಯದ ವಿಡಿಯೋ ಮಾಡಿ, ವೀಡಿಯೊವನ್ನು ಇಂಟರ್ನೆಟ್‌ನಲ್ಲಿ ವೈರಲ್ ಮಾಡುವಂತೆ ಬೆದರಿಕೆ ಹಾಕಿದ್ದಾರೆ ಆರೊಪಿಸಲಾಗಿದೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 363 (ಅಪಹರಣ), ಹದಿನಾರು ವರ್ಷದೊಳಗಿನ ಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ವಿರೋಧಿ ಕಾಯ್ದೆ 376 ಡಿಎ, ಪೋಕ್ಸೊ ಕಾಯ್ದೆಯ ಸೆಕ್ಷನ್ 6 ಮತ್ತು 13 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ, ಹುಡುಗಿಯ ತಂದೆ ಡಿಸೆಂಬರ್ 18, 2022 ರಂದು ತಮ್ಮ ಹಳ್ಳಿಯಲ್ಲಿ ಫುಟ್‌ಬಾಲ್ ಪಂದ್ಯ ಆಡಲು ಹೋಗುತ್ತಿರುವುದಾಗಿ ಮಗಳು ಹೇಳಿ ಹೋಗಿದ್ದಳು ಎಂದು ತಿಳಿಸಿದ್ದಾರೆ.

Related posts

ಕಾಲೇಜಿಗೆ ಅಕ್ರಮ ಪ್ರವೇಶ ಮತ್ತು ಬೆದರಿಕೆ ಆರೋಪ! ಡಾ| ಜ್ಯೋತಿ ಆರ್.ಪ್ರಸಾದ್ ರಿಂದ ಸುಳ್ಯ ಠಾಣೆಗೆ ದೂರು

ಗೃಹ ಸಚಿವರ ಆಪ್ತನ ಮನೆ ಮೇಲೆ ಐಟಿ ದಾಳಿ..! ಕಾಂಗ್ರೆಸ್ ನಾಯಕನ ಮನೆ ಮೇಲೆ ಬೆಳ್ಳಂಬೆಳಗ್ಗೆ ಐಟಿ ದಾಳಿ..!

ನಮ್ಮ ಮೆಟ್ರೋದಲ್ಲಿ ಯುವತಿಯರ ಅಂಗಾಂಗಗಳ ವಿಡಿಯೋ ಮಾಡ್ತಿದ್ದ ಕಾಮುಕ ಅರೆಸ್ಟ್..! ಸುಮಾರು 50 ಯುವತಿಯರ ವಿಡಿಯೋ ಮತ್ತು ಫೋಟೋಗಳು ಪತ್ತೆ..!