Latestಕ್ರೈಂವೈರಲ್ ನ್ಯೂಸ್ಸಿನಿಮಾ

ಹುಡುಗಿಯನ್ನು ಹೊಗಳುವ ಭರದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಅಪಮಾನ..! ರಕ್ಷಕ್ ಬುಲೆಟ್‌ ವಿರುದ್ಧ ದೂರು..!

1.5k

ನ್ಯೂಸ್‌ ನಾಟೌಟ್: ಬಿಗ್‌ಬಾಸ್ ಸೀಸನ್ 10 ಸ್ಪರ್ಧಿ ರಕ್ಷಕ್ ಬುಲೆಟ್‌ ಭರ್ಜರಿ ಬ್ಯಾಚುಲರ್ಸ್ ಎಂಬ ಕಾರ್ಯಕ್ರಮದ ವೇದಿಕೆಯಲ್ಲಿ ಹೇಳಿದ ಡೈಲಾಗ್‌ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದೆ.

ಪಕ್ಕದಲ್ಲಿದ್ದ ಹುಡುಗಿಯನ್ನು ಹೊಗಳುವ ಭರದಲ್ಲಿ ರಕ್ಷಕ್ ಬುಲೆಟ್ ನಾಡದೇವಿ ಚಾಮುಂಡೇಶ್ವರಿಗೆ ಅಪಮಾನ ಮಾಡಿದ ಆರೋಪಕ್ಕೆ ತುತ್ತಾಗಿದ್ದಾರೆ.

ಭರ್ಜರಿ ಬ್ಯಾಚುಲರ್ಸ್ ಸ್ಟೇಜ್‌ ಮೇಲೆ ರಕ್ಷಕ್ ಬುಲೆಟ್ “ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು ಪ್ಯಾಂಟು ಶರ್ಟು ಹಾಕೊಂಡು ಸ್ವಿಟ್ಜರ್ಲೆಂಡ್‌ನಲ್ಲಿ ಟ್ರಿಪ್ ಹೊಡಿತಿದ್ದಾಳೆ ಅನ್ನಿಸ್ತಿದೆ” ಎಂದು ಡೈಲಾಗ್ ಹೊಡೆದಿದ್ದಾರೆ.

ಇದು ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಿದೆ. ಹೀಗಾಗಿ ಬಿಗ್ ಬಾಸ್ ಮಾಜಿ ಸ್ಪರ್ಧಿ ರಕ್ಷಕ್ ಬುಲೆಟ್ ಹಾಗೂ ಖಾಸಗಿ ವಾಹಿನಿಯಲ್ಲಿ ಕಾರ್ಯಕ್ರಮ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ.

ರಕ್ಷಕ್ ಬುಲೆಟ್ ವಿರುದ್ಧ ಇಂದು(ಮಾ.26) ಹಿಂದೂ ಕಾರ್ಯಕರ್ತ ಮಹೇಶ್ ಎಂಬುವವರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿಟ್ರ್ಯಾಕ್ಟರ್‌ ಹರಿದು 5ವರ್ಷದ ಮಗು ಸಾವು..! ಪ್ರಕರಣ ದಾಖಲು

See also  ವಾರಿಸುದಾರರ ಕೈ ಸೇರಿದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬಿದ್ದು ಸಿಕ್ಕಿದ ಪರ್ಸ್, ಕಂಡಕ್ಟರ್ ಕಾರ್ಯಕ್ಕೆ ಶ್ಲಾಘನೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget