ನ್ಯೂಸ್ ನಾಟೌಟ್: ಅಪಘಾತಕ್ಕೀಡಾಗಿ ಬೆಂಕಿಗಾಹುತಿಯಾಗಿದ್ದ ಕಾರೊಂದು ನೋಡ ನೋಡುತ್ತಲೇ ರಸ್ತೆ ಮೇಲೆ ವೇಗವಾಗಿ ಚಲಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ರಾಜಸ್ತಾನದ ಜೈಪುರ ಜಿಲ್ಲೆಯ ಅಜ್ಮೀರ್ ರಸ್ತೆಯ ಸುದರ್ಶನಪುರ ಪುಲಿಯಾ ಕಡೆಗೆ ಚಾಲಕರಹಿತ ಕಾರು ಶನಿವಾರ ಎಲಿವೇಟೆಡ್ ರಸ್ತೆಯಲ್ಲಿ ವೇಗವಾಗಿ ಚಲಿಸಿ ನಿಲ್ಲಿಸಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಬಳಿಕ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ದಾರಿಹೋಕ ಪ್ರಯಾಣಿಕರು ಅದನ್ನು ನಿಂತು ನೋಡುತ್ತಿದ್ದಾಗಲೇ ಕಾರು ನೋಡನೋಡುತ್ತಲೇ ವೇಗವಾಗಿ ಚಲಿಸಿದೆ.
ಕಾರು ರಸ್ತೆ ಮೇಲೆ ಚಲಿಸುತ್ತಿದ್ದಂತೆಯೇ ಅಲ್ಲಿ ನೆರೆದಿದ್ದ ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಕಾರು ವೇಗವಾಗಿ ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಬಳಿಕ ಕಾರು ಬೆಂಕಿ ಹತ್ತಿಕೊಂಡು ಸಂಪೂರ್ಣವಾಗಿ ಉರಿದು ಹೋಗಿದೆ.
ಶನಿವಾರ(ಅ.12) ಸಂಜೆ ಈ ಘಟನೆ ನಡೆದಿದ್ದು, ಇದನ್ನು ದಾರಿಹೋಕರೊಬ್ಬರು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅದೃಷ್ಟವಶಾತ್ ಚಾಲಕ ಮತ್ತು ಇತರರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
Click