ಕರಾವಳಿಕ್ರೈಂವೈರಲ್ ನ್ಯೂಸ್

ವಿಟ್ಲ:18 ದಿನಗಳ ಬಳಿಕ ದಫನ ಮಾಡಿದ ಮೃತದೇಹ ಹೊರತೆಗೆದು ತನಿಖೆ..! ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದಿದ್ದ ಪತ್ನಿ..!

249
pc cr: prasthutha.com

ನ್ಯೂಸ್ ನಾಟೌಟ್: 18 ದಿನಗಳ ಹಿಂದೆ ಸಾವಿಗೀಡಾಗಿದ್ದ ವ್ಯಕ್ತಿಯ ಸಾವಿನ ಬಗ್ಗೆ ಅನುಮಾನಗಳಿದ್ದ ಕಾರಣ ಮೃತರ ಸಹೋದರ ಪೊಲೀಸರಿಗೆ ದೂರು ನೀಡಿದ ಘಟನೆ ವಿಟ್ಲದ ಮಂಜೇಶ್ವರದಲ್ಲಿ ನಡೆದಿದೆ. ಪೊಲೀಸರು ದಫನ ಮಾಡಿದ ಮೃತದೇಹವನ್ನು ಮೇಲಕ್ಕೆತ್ತಿ ಮರು ತನಿಖೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ಸುಂಕದಕಟ್ಟೆ ಮಜೀರ್ಪಳ್ಳ ನಿವಾಸಿ ಅಶ್ರಫ್ (44) ಮೃತಪಟ್ಟವರು ಎನ್ನಲಾಗಿದೆ. ಇವರು ಮೇ 6 ರಂದು ಮೃತಪಟ್ಟಿದ್ದು, ಅದೇ ದಿನ ಸಂಜೆ ಕನ್ಯಾನ ಬಂಡಿತ್ತಡ್ಕದ ರಹ್ಮಾನಿಯಾ ಜುಮ್ಮಾ ಮಸೀದಿಯಲ್ಲಿ ದಫನ ನಡೆಸಲಾಗಿತ್ತು.

ಅದೊಂದು ಸಹಜ ಸಾವಲ್ಲ ಎಂದು ಆರೋಪಿಸಿ ಮೃತರ ಸಹೋದರ ಇಬ್ರಾಹಿಂ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಮಂಜೇಶ್ವರ ಪೊಲೀಸರು, ಧಪನಗೊಂಡ ದೇಹವನ್ನು ಮೇಲಕ್ಕೆತ್ತಿ ಶವ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶ ಪಡೆದು ಮಂಜೇಶ್ವರ ಪೊಲೀಸರು ರಹ್ಮಾನಿಯಾ ಜುಮ್ಮಾ ಮಸೀದಿಗೆ ಗುರುವಾರ(ಮೇ.23) ಬೆಳಗ್ಗೆ ಆಗಮಿಸಿದ್ದಾರೆ. ಸ್ಥಳದಲ್ಲಿ ಬಂಟ್ವಾಳ ತಹಶೀಲ್ದಾರ್ ಉಪಸ್ಥಿತರಿದ್ದಾರೆ. ಮೃತ ಅಶ್ರಫ್ ತಮ್ಮ ಮನೆ ಸಮೀಪ ಗೂಡಂಗಡಿಯಲ್ಲಿ ವ್ಯಾಪಾರ ನಡೆಸುತ್ತಿದ್ದು, ಮೇ 5 ರಂದು ರಾತ್ರಿ ಗೂಡಂಗಡಿ ಮುಚ್ಚಿದ ಬಳಿಕ, ಆಹಾರ ಸೇವಿಸಿ ನಿದ್ರಿಸಿದ್ದರು. ಆದರೆ ಮರು ದಿನ ಬೆಳಗ್ಗೆ 6 ಗಂಟೆಗೆ ಅವರನ್ನು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿತ್ತು. ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಪತ್ನಿ ಇತರರಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.

Click 👇

https://newsnotout.com/2024/05/prajwal-revanna-passport-issue-kannada-news
https://newsnotout.com/2024/05/hindu-muslim-case-court-issue
https://newsnotout.com/2024/05/love-women-and-boy
See also  ಪರಪ್ಪನ ಅಗ್ರಹಾರ ಸೇರಿದ್ದ ಐಪಿಎಸ್ ಅಧಿಕಾರಿಗೆ ಷರತ್ತು ಬದ್ಧ ಜಾಮೀನು! ಎಡಿಜಿಪಿಯಾಗಿ ಜೈಲು ಸೇರಿದ ಕರ್ನಾಟಕದ ಮೊದಲ ಐಪಿಎಸ್ ಅಧಿಕಾರಿಯ ಕಥೆ ಇಲ್ಲಿದೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget