ಕ್ರೈಂ

ಕರಾವಳಿಗೊಂದು ಹೆಮ್ಮೆಯ ಕಿರೀಟ, ಪ್ರಗತಿಪರ ಕೃಷಿಕನಿಗೆ ಒಲಿದ ಪದ್ಮಶ್ರೀ

718

ಮಂಗಳೂರು: ಜೀವವನ್ನು ಒತ್ತೆಯಿಟ್ಟು ಜೀವಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ ಕರ್ನಾಟಕದ ಭಗೀರಥ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ಪ್ರಸಕ್ತ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ 77ರ ಹರೆಯದ ಮಹಾಲಿಂಗ ನಾಯ್ಕ ಅವರಿಗೆ ಪದ್ಮಶ್ರೀ ಒಲಿದು ಬಂದಿದೆ.

ಕರಾವಳಿ ಜಿಲ್ಲೆಗಳಲ್ಲಿ ಕೃಷಿ ನಿಧಾನವಾಗಿ ಹಿನ್ನೆಲೆಗೆ ಸರಿಯುತ್ತಿರುವ ಸಂದರ್ಭದಲ್ಲಿ ಕೃಷಿಯೇ ಬದುಕಿಗೆ ಮೂಲಾಧಾರವೆಂಬ ಕಲ್ಪನೆಯನ್ನು ಬಿತ್ತುತ್ತಿರುವ ಸಾಧಕ ಅಮೈ ಮಹಾಲಿಂಗ ನಾಯ್ಕ್. ಕೃಷಿ ಕಾಯಕದ ಮೂಲಕ ಸ್ವಾವಲಂಬಿ ಜೀವನ ಸಾಧ್ಯ ಎಂಬುದನ್ನು ಆಧುನಿಕ ತಲೆಮಾರಿಗೆ ತೋರಿಸಿಕೊಟ್ಟಿದ್ದಾರೆ. ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್‌ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಭಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು, ಇದೇ ವ್ಯವಸ್ಥೆಯಲ್ಲಿ ವಿದ್ಯುತ್‌ ರಹಿತವಾಗಿ ಗ್ರಾವಿಟಿ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಟ್ರಿಂಕ್ಲರ್ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾಲಿಂಗ ನಾಯ್ಕ್ ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದ ಸಿಂಗಲ್ ಮ್ಯಾನ್ ಆರ್ಮಿ ಆಗಿದ್ದಾರೆ. ಇವರ ಸಾಧನೆಗೆ ಸಾಲು ಸಾಲು ಪ್ರಶಸ್ತಿ ಲಭಿಸಿದ್ದು ಈಗ ಪದ್ಮಶ್ರೀ ಕೂಡ ಒಲಿದು ಬಂದಿದೆ.

See also  ಸುಳ್ಯದ ಐಸ್ ಕ್ಯಾಂಡಿ ಬಾಯ್ ಇನ್ನಿಲ್ಲ, ಹಠಾತ್ ಇಹಲೋಕ ತ್ಯಜಿಸಿದ ಮನೆಮನೆಗೆ ಸೈಕಲ್ ಏರಿ ಐಸ್ ಕ್ರೀಂ ಹಾಕುತ್ತಿದ್ದ ಯುವಕ
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget