ಕರಾವಳಿಕ್ರೈಂಪುತ್ತೂರು

ಸೌದಿ ಅರೇಬಿಯಾದಲ್ಲಿ ಅಪಘಾತ: ವಿಟ್ಲ ಮೂಲದ ಯುವಕ ಸಾವು

360

ನ್ಯೂಸ್‌ ನಾಟೌಟ್‌ : ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ವಿಟ್ಲ ಸಮೀಪದ ಉಕ್ಕುಡ ನಿವಾಸಿ ಮುಹಮ್ಮದ್ ಮುಸ್ಲಿಯಾರ್ ಎಂಬವರ ಹಿರಿಯ ಪುತ್ರ ಹಬೀಬ್ ಉಕ್ಕುಡ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಕೆಲಸದ ನಿಮಿತ್ತ ಮೂರು ತಿಂಗಳ ಹಿಂದೆ ವಿದೇಶಕ್ಕೆ ತೆರಳಿದ್ದ ಹಬೀಬ್, ಕಾರಿನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಕಾರು ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಮಗುಚಿ ಬಿದ್ದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಹಬೀಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಸೌದಿಯ ಆಸ್ಪತ್ರೆಯಲ್ಲಿರಿಸಲಾಗಿದೆ. ಇತ್ತ ರಂಝಾನ್ ಸಂಭ್ರಮದಲ್ಲಿದ್ದ ಕುಟುಂಬಸ್ಥರಿಗೆ ಹಬೀಬ್ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಆಕ್ರಂದನ ಮುಗಿಲು ಮುಟ್ಟಿದೆ.

See also  ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದ ನಟ ವಿಜಯ್ ವಿರುದ್ಧ ದೂರು ದಾಖಲು..! ಧಾರ್ಮಿಕ ಆಚರಣೆಗೆ ಸಂಬಂಧವಿಲ್ಲದ ಕುಡುಕರು, ರೌಡಿಗಳು ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದಾರೆಂದು ದೂರು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget