ಕ್ರೈಂ

ವಿಟ್ಲ: ಎಸ್ ಎಸ್ ಎಲ್‌ ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ. ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜಾ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ (15 ) ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ. ಸಂದೀಪ್ ೧೦ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿಯಾಗಿದ್ದು ಶಾಲೆಗೆ ಸರಿಯಾಗಿ ಹೋಗುತ್ತಿರಲಿಲ್ಲ ಎನ್ನಲಾಗಿದೆ. ರಾತ್ರಿ ಕೋಣೆಯಲ್ಲಿ ಮಲಗಿದ್ದ ಸಂದೀಪ್ ಬೆಳಗ್ಗೆ ಮನೆಯವರು ನೋಡಿದಾಗ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಕಲ್ಲುಗುಂಡಿ: ಪಾದಾಚಾರಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಪರಾರಿ..! ಗಂಭೀರ ಗಾಯಗೊಂಡ ಪಾದಾಚಾರಿ..!

ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು! ಕಾರಣ ನಿಗೂಢ!

ಸಂಪಾಜೆಯಲ್ಲಿ ಒಂದೇ ದಿನ ಹೃದಯಾಘಾತಕ್ಕೆ 2ನೇ ಬಲಿ, ದೀಪಾವಳಿ ಸಂಭ್ರಮದಲ್ಲಿರುವಾಗಲೇ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಕುಸಿದು ಬಿದ್ದು ಸಾವು