ಕ್ರೀಡೆ/ಸಿನಿಮಾಕ್ರೈಂವಿಡಿಯೋವೈರಲ್ ನ್ಯೂಸ್

ಫೇಕ್ ವಿಡಿಯೋ ಬಗ್ಗೆ ರಶ್ಮಿಕಾ ಮಂದಣ್ಣ ಹೇಳಿದ್ದೇನು..? ಕೊಡಗಿನ ಬೆಡಗಿಯ ಮೊದಲ ಪ್ರತಿಕ್ರಿಯೆ ಹೇಗಿತ್ತು?

258

ನ್ಯೂಸ್‌ ನಾಟೌಟ್‌: ಎದೆ ಬಾಗ ಕಾಣುವಂತಹ ಫೇಕ್ ವಿಡಿಯೋವೊಂದು ಸಾಮಾಜಿಕ ಜಾಲತಾನದಲ್ಲಿ ವೈರಲ್ ಆಗಿತ್ತು ಜೊತೆಗೆ ಅಮಿತಾ ಬಚ್ಚನ್ ಸೇರಿದಂತೆ ಹಲವರು ಬೇಸರ ವ್ಯಕ್ತಪಡಿಸಿರು.

ಈ ವಿಡಿಯೋ ಕುರಿತಂತೆ ಅನೇಕ ಕಲಾವಿದರು ಮತ್ತು ರಶ್ಮಿಕಾ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು. ಈಗ ಸ್ವತಃ ರಶ್ಮಿಕಾ ಮಂದಣ್ಣ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಯಿಂದಾಗಿ ನನಗೆ ತುಂಬಾ ನೋವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ನೆನ್ನೆಯಿಂದ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್ ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇಂಥದ್ದೊಂದು ಸಂಗತಿಯನ್ನು ಹಂಚಿಕೊಳ್ಳಲು ತುಂಬಾ ನೋವಾಗುತ್ತೆ.

ಆದರೂ, ಇಂತಹ ಡೀಪ್‍ ಫೇಕ್ ವಿಡಿಯೋ ಬಗ್ಗೆ ಮಾತನಾಡಲೇಬೇಕಿದೆ. ಪ್ರಮಾಣಿಕವಾಗಿ ಹೇಳೋದಾದರೆ, ತಂತ್ರಜ್ಞಾನವನ್ನು ದುರುಪಯೋಗವು ಅತ್ಯಂತ ಭಯಾನಕವಾಗಿದೆ. ನಾನು ಮಹಿಳೆಯಾಗಿ ಮತ್ತು ನಟಿಯಾಗಿ ನನ್ನನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎನ್ನುವುದರ ಅರಿವಿದೆ. ನನ್ನ ಕುಟುಂಬ ಮತ್ತು ಸ್ನೇಹಿತರು ಹಾಗೂ ಹಿತೈಷಿಗಳು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಆದರೆ, ನಾನು ಶಾಲೆ ಅಥವಾ ಕಾಲೇಜಿನಲ್ಲಿ ಇದ್ದಾಗ ಈ ರೀತಿ ಆಗಿದ್ದರೆ ಅದನ್ನು ಹೇಗೆ ನಿಭಾಯಿಸುತ್ತಿದ್ದೆ ಎಂದು ಊಹಿಸಲೂ ಅಸಾಧ್ಯ ಎಂದು ಹೇಳಿದ್ದಾರೆ.

ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಯಿತು. ಎದೆಭಾಗ ಕಾಣಿಸುವಂತೆ ಬಟ್ಟೆ ಹಾಕಿರುವ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದರು. ರಶ್ಮಿಕಾ ಮಂದಣ್ಣ ಯಾಕೆ ಹೀಗೆ ಎಂದು ಹಲವರು ಪ್ರಶ್ನಿಸಿದ್ದರು. ಆದರೆ, ಅದು ರಶ್ಮಿಕಾ ಅವರ ವಿಡಿಯೋ ಅಲ್ಲವೆಂದು ಗೊತ್ತಾಗಿದೆ. ಅಭಿಷೇಕ್ ಅನ್ನುವವರು ಮೂಲ ವಿಡಿಯೋವನ್ನು ಪತ್ತೆ ಮಾಡಿ ಎರಡೂ ವಿಡಿಯೋವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದರು.

See also  ಕರಿಕೆ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ 18 ವರ್ಷದ ಯುವತಿ, ಸಾವಿನ ಹಿಂದಿರುವ ಕಾರಣ ನಿಗೂಢ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget