ಕೆವಿಜಿ ಕ್ಯಾಂಪಸ್‌

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

147

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜ. 25ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.

ಎನ್ಎಸ್ಎಸ್ ಘಟಕದ ವಿದ್ಯಾರ್ಥಿ ವಂಶಿಕ ಎಸ್ ಪಿ ಪ್ರತಿಜ್ಞಾವಿಧಿ ಬೋಧಿಸಿದರು. ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನದ ಅಂಗವಾಗಿ ವಾರ್ಷಿಕವಾಗಿ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ ವಿ, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್ಎಸ್ಎಸ್ ವಿದ್ಯಾರ್ಥಿ ಸುಜ್ಯಶ್ರೀ ಸಾಹೋ ಕ್ಷಯ ರೋಗ ನಿರ್ಮೂಲನಾ ಪ್ರತಿಜ್ಞಾವಿಧಿ ಬೋಧಿಸಿ, ವೈಶಾಲಿ ಪಿ ಜೆ, ಪ್ರಸನ್ನ ಬಿ ಎಸ್, ರಾಹುಲ್ ರಾಜನ್ ಹಾಗೂ ದೀಪ್ತಿ ಧರ್ಮರಾಜ್ ಪ್ರಾರ್ಥಿಸಿ, ರಕ್ಷಿತಾ ಬಿ ಸ್ವಾಗತಿಸಿ, ರೋಹನ್ ಎಲ್. ಕೆ. ವಂದಿಸಿದರು.

See also  ಸುಳ್ಯ: ಅಂತರ್ ಕಾಲೇಜು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಎನ್ಎಂಸಿ ವಿದ್ಯಾರ್ಥಿನಿಗೆ ಬಹುಮಾನ, ಗಾನ ಬಿ ಡಿ. ಅವರಿಗೆ ತೃತೀಯ ಸ್ಥಾನ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget