ರಾಜಕೀಯರಾಜ್ಯವೈರಲ್ ನ್ಯೂಸ್

ಒಂದೇ ಕುಟುಂಬದ 85 ಮಂದಿಯಿಂದ ಏಕಕಾಲಕ್ಕೆ ಮತದಾನ..! ಮತದಾನಕ್ಕಾಗಿ ಎಲ್ಲರೂ ಒಂದೆಡೆ ಸೇರುವ ಸಂಪ್ರದಾಯ

234

ನ್ಯೂಸ್ ನಾಟೌಟ್: ಲೋಕಸಭಾ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಹಲವು ಸ್ವಾರಸ್ಯಕರ ಘಟನೆಗಳಿಗೆ ಸಾಕ್ಷಿಯಾಗುತ್ತಿವೆ. ಅಚ್ಚರಿಯೆಂಬಂತೆ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿದ್ದಾರೆ. ಹೌದು. ಚಿಕ್ಕಬಳ್ಳಾಪುರ ನಗರದ ಮತಗಟ್ಟೆ ಸಂಖ್ಯೆ 161ರಲ್ಲಿ ವಾರ್ಡ್ ನಂಬರ್ 19ರ ನಿವಾಸಿಗಳು ತಮ್ಮ ಹಕ್ಕು ಚಲಾಯಿಸಿದ್ದಾರೆ.

ತಾಯಿ-ಮಗಳು-ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ 85 ಮಂದಿ ಮತ ಹಾಕಿದ್ದಾರೆ. ಮತದಾನಕ್ಕಾಗಿ ಎಲ್ಲರೂ ಒಂದೆಡೆ ಸೇರಿ ಮತದಾನ ಮಾಡುವ ಸಂಪ್ರದಾಯವಿದೆ. ಅಂತೆಯೇ ಬಾದಾಮ್ ಫ್ಯಾಮಿಲಿಯಿಂದ ಒಂದೇ ಸಮಯದಲ್ಲಿ ಮತದಾನ ನಡೆದಿದೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಡಾ.ಸುಧಾಕರ್ ಹಾಗೂ ಕಾಂಗ್ರೆಸ್‍ನಿಂದ ರಕ್ಷಾ ರಾಮಯ್ಯ ಚುನಾವಣಾ ಅಖಾಡದಲ್ಲಿದ್ದಾರೆ.

See also  ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರನ್ನು ಭೇಟಿಯಾದ ಪುತ್ತಿಲ ಪರಿವಾರ ನಾಯಕರು..!ಕರಾವಳಿಯ ರಾಜಕೀಯದಲ್ಲಿ ಗರಿಗೆದರಿದ ಕುತೂಹಲ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget