Latestಕ್ರೈಂವೈರಲ್ ನ್ಯೂಸ್

ಸಾರ್ವಜನಿಕ ಶೌಚಾಲಯದಲ್ಲಿ ಗೋಣಿಚೀಲದೊಳಗೆ ಯುವತಿಯ ಶವ ಪತ್ತೆ..! 50 ಕ್ಕೂ ಹೆಚ್ಚು ಮಂದಿಯ ವಿಚಾರಣೆ..!

1.6k

ನ್ಯೂಸ್ ನಾಟೌಟ್ : ದೆಹಲಿಯ ಅಶೋಕ್ ವಿಹಾರ್ ಪ್ರದೇಶದ ಸಾರ್ವಜನಿಕ ಶೌಚಾಲಯವೊಂದರಲ್ಲಿ ಗೋಣಿಚೀಲದಲ್ಲಿ ಯುವತಿಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ(ಫೆ.22) ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಮಾಡೆಲ್ ಟೌನ್‌ ನ 22 ವರ್ಷದ ಯುವತಿ ಎಂದು ಗುರುತಿಸಲಾಗಿದೆ.

‘ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಯಿತು. ತನಿಖೆ ವೇಳೆ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿ, ಅನುಮಾನ ಬಂದ ಸುಮಾರು 50 ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಲಾಯಿತು. ಈ ವೇಳೆ ಕೃತ್ಯದಲ್ಲಿ ಭಾಗಿಯಾಗಿದ್ದ 50 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

ವಿಚಾರಣೆ ವೇಳೆ ಆರೋಪಿಯು ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಮೃತ ಯುವತಿ ನನಗೆ ಪರಿಚಯವಿದ್ದಳು. ಆಕೆಯನ್ನು ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದೆ. ಈ ವೇಳೆ ನಮ್ಮಿಬ್ಬರ ನಡುವೆ ಜಗಳ ನಡೆಯಿತು. ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಆರೋಪಿ ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

See also  ನಟ ಚೇತನ್‌ ಅಹಿಂಸಾ ಬಂಧನ
  Ad Widget   Ad Widget   Ad Widget   Ad Widget   Ad Widget   Ad Widget   Ad Widget