ಕರಾವಳಿಕಾಸರಗೋಡುಕ್ರೈಂರಾಜಕೀಯವೈರಲ್ ನ್ಯೂಸ್

ವಯನಾಡು ಭೂಕುಸಿತ: ಕೇರಳಕ್ಕೆ ಬಂದಿಳಿದ ಪ್ರಧಾನಿ ಮೋದಿ..! ಭೂಕುಸಿತಕ್ಕೆ ಒಳಗಾದ ಪ್ರದೇಶಗಳಿಗೆ ಭೇಟಿ, ಸಂತ್ರಸ್ತರ ಜೊತೆ ಮಾತುಕತೆ..!

254

ನ್ಯೂಸ್ ನಾಟೌಟ್: ಭೂಕುಸಿತದಿಂದ ಯುದ್ಧಭೂಮಿಯಂತಾಗಿರುವ ವಯನಾಡಿಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಇಂದು(ಆ.10) ಕೇರಳಕ್ಕೆ ಆಗಮಿಸಿದ್ದಾರೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ಮೋದಿ ವಿಮಾನ ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ವಾಗತಿಸಿದರು.

ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ವಯನಾಡ್‌ಗೆ ತೆರಳಿ ಭೂಕುಸಿತಕ್ಕೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಭೇಟಿ ಸಂದರ್ಭ ರಕ್ಷಣಾ ಕಾರ್ಯಾಚರಣೆ ಮತ್ತು ಪುನರ್ವಸತಿ ಕಾರ್ಯಗಳ ಬಗ್ಗೆ ರಕ್ಷಣಾ ಪಡೆಗಳಿಂದ ಪ್ರಧಾನಿ ಮಾಹಿತಿ ಪಡೆಯಲಿದ್ದಾರೆ. ಪರಿಹಾರ ಶಿಬಿರ ಮತ್ತು ಆಸ್ಪತ್ರೆಗೆ ಭೇಟಿ ನೀಡಲಿರುವ ಅವರು, ಸಂತ್ರಸ್ತರ ಜೊತೆ ಮಾತನಾಡಲಿದ್ದಾರೆ. ನಂತರ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ವರದಿ ತಿಳಿಸಿದೆ.

See also  ಶಾಲೆಯಲ್ಲಿ ಬಾಲಕನಿಗೆ ಥಳಿತ, ಎದೆ ನೋವೆಂದು ಆಸ್ಪತ್ರೆಯಲ್ಲಿ ಮಲಗಿದ ವಿದ್ಯಾರ್ಥಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲು
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget