ಕೆವಿಜಿ ಕ್ಯಾಂಪಸ್‌

ಸುಳ್ಯ: ಕೆವಿಜಿ ಕಾನೂನು ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

168

ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಕಾನೂನು ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ವರ್ಷದ ಪ್ರಥಮ ವರ್ಷದ ಕಾನೂನು ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಶುಕ್ರವಾರ (ನ .15) ಆಯೋಜಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಡಾ| ಉದಯಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಹೇಮನಾಥ್ ಕೆ ವಿ, ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಕೆ ವಿ ದಾಮೋದರ ಗೌಡ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾನಾಧಿಕಾರಿ ಪ್ರೊ.ಟೀನಾ ಎಚ್ ಎಸ್ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೀವಿತ್ ಕೆ ಪಿ, ಉಪಾಧ್ಯಕ್ಷ ಮುಶರಫ್ ಅಹಮ್ಮದ್, ಕಾರ್ಯದರ್ಶಿ ಮಾನಸ, ಜತೆ ಕಾರ್ಯದರ್ಶಿ ಸುಶ್ಮಾಂಜಲಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಕಾಲೇಜಿನ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿಯರಾದ ರಮ್ಯಾ ಪ್ರಾರ್ಥಿಸಿದರು, ಮಾನಸ ಸ್ವಾಗತಿಸಿ ಸುಶ್ಮಾಂಜಲಿ ವಂದಿಸಿದರು. ನಂದನ ಕಾರ್ಯಕ್ರಮ ನಿರೂಪಿಸಿದರು.

See also  ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ, ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಪರಿಸರ ಉಳಿಸಿ : ಡಾ. ಕೆ.ವಿ. ಚಿದಾನಂದ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget