Latestಕ್ರೀಡೆಕ್ರೀಡೆ/ಸಿನಿಮಾಬೆಂಗಳೂರುರಾಜ್ಯ

RCB ತಂಡದ ಮಾಜಿ ಮಾಲೀಕ ವಿಜಯ್‌ ಮಲ್ಯ ಭಾವುಕ ಪೋಸ್ಟ್‌..! “ನಾನು ಆರ್‌ ಸಿಬಿಯನ್ನು ಸ್ಥಾಪಿಸಿದಾಗ..!”

640

ನ್ಯೂಸ್‌ ನಾಟೌಟ್‌: ಅಹಮದಾಬಾದ್‌ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ಫೈನಲ್‌ನಲ್ಲಿ ಪಂಜಾಬ್‌ ವಿರುದ್ಧ 6 ರನ್‌ಗಳ ಜಯ ಸಾಧಿಸಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಐಪಿಎಲ್‌) ತಂಡ ಚೊಚ್ಚಲ ಕಪ್‌ ಗೆದ್ದಿದೆ.

ಐಪಿಎಲ್‌ ಆರಂಭವಾದ ಕಳೆದ 18 ವರ್ಷಗಳಲ್ಲಿ ಮೊದಲ ಬಾರಿ ಚಾಂಪಿಯನ್‌ ಆಗಿದ್ದು, ಆರ್‌ಸಿಬಿ ಗೆಲುವನ್ನು ಸಂಭ್ರಮಿಸಿರುವ ತಂಡದ ಮಾಜಿ ಮಾಲೀಕ, ಉದ್ಯಮಿ ವಿಜಯ್‌ ಮಲ್ಯ, ‘ನಾನು ಆರ್‌ ಸಿಬಿಯನ್ನು ಸ್ಥಾಪಿಸಿದಾಗ ಬೆಂಗಳೂರಿಗೆ ಐಪಿಎಲ್ ಟ್ರೋಫಿ ಬರಬೇಕು ಎಂಬುದು ನನ್ನ ಕನಸಾಗಿತ್ತು. ಯುವಕನಾಗಿದ್ದ ಕಿಂಗ್ ಕೊಹ್ಲಿಯನ್ನು ಆಯ್ಕೆ ಮಾಡಿದ್ದೆ, ಅವರು 18 ವರ್ಷಗಳ ಕಾಲ ಆರ್‌ ಸಿಬಿಯೊಂದಿಗೆ ಇದ್ದು ಚಾಂಪಿಯನ್‌ ಆಗಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.

‘ಆರ್‌ಸಿಬಿ ಇತಿಹಾಸದಲ್ಲಿ ಕ್ರಿಸ್ ಗೇಲ್ ಮತ್ತು ಮಿಸ್ಟರ್ 360 ಎಬಿ ಡಿವಿಲಿಯರ್ಸ್ ಅಳಿಸಲಾಗದ ಭಾಗವಾಗಿದ್ದಾರೆ. ಕೊನೆಗೂ ಐಪಿಎಲ್ ಟ್ರೋಫಿ ಬೆಂಗಳೂರಿಗೆ ಆಗಮಿಸುತ್ತಿದೆ. ನನ್ನ ಕನಸನ್ನು ನನಸಾಗಿಸಿದ ಎಲ್ಲರಿಗೂ ಅಭಿನಂದನೆಗಳು, ಮತ್ತೊಮ್ಮೆ ಧನ್ಯವಾದಗಳು. ಆರ್‌ ಸಿಬಿ ಅಭಿಮಾನಿಗಳು ಟ್ರೋಫಿಗೆ ಅರ್ಹರು. ಈ ಸಲ ಕಪ್‌ ಬೆಂಗಳೂರಿಗೆ ಬರುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಇನ್ನೊಂದು ಪೋಸ್ಟ್‌ ನಲ್ಲಿ, ‘ಆರ್‌ಸಿಬಿ 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್‌ ಆಗಿದೆ. 2025ರ ಟೂರ್ನಿ ಅದ್ಭುತವಾಗಿತ್ತು. ಆರ್‌ ಸಿಬಿ ಉತ್ತಮ ತರಬೇತಿ ಮತ್ತು ಪ್ರೋತ್ಸಾಹ ಹೊಂದಿರುವ ಸಮತೋಲಿತ ತಂಡವಾಗಿದೆ. ಎಲ್ಲರಿಗೂ ಅಭಿನಂದನೆಗಳು’ ಎಂದು ಹೇಳಿದ್ದಾರೆ.

See also  ಮಹಿಳೆಗೆ ನಾಯಿ ಕಚ್ಚಿದಾಗ ಸಿಸಿಟಿವಿ ವರ್ಕ್‌ ಆಗ್ತಿರಲಿಲ್ಲ ಎಂದದ್ದೇಕೆ? ಪೊಲೀಸರ ಮುಂದೆ ನಟ ದರ್ಶನ್ ಕೊಟ್ಟ ಹೇಳಿಕೆಯೇನು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget