Uncategorized

25 ವರ್ಷದ ಯುವತಿಯ ಮದ್ವೆಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ

ಕಳೆದ ವರ್ಷ 45 ವರ್ಷದ ವ್ಯಕ್ತಿ ಜತೆಗೆ 25ರ ಯುವತಿ ಮದ್ವೆಯಾಗಿದ್ದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಆದರೀಗ ಶಂಕರಣ್ಣ(45)  ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕಳೆದ ವರ್ಷ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಮತ್ತು ಮೇಘನಾ ಅವರ ಮದುವೆ ನಡೆದಿತ್ತು. ಆದರೆ ಮದುವೆಯಾಗಿ ಕೆಲವೇ ತಿಂಗಳಲ್ಲಿ ಶಂಕರಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರ್ನಾಲ್ಕು ದಿನದಿಂದ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಹೀಗಾಗಿ ಕೋಪ ಮಾಡಿಕೊಂಡು ಸೋಮವಾರ ಮನೆ ಬಿಟ್ಟು ಹೋದ ಶಂಕರಣ್ಣನವರು ತಮ್ಮ ಮನೆಯ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Related posts

ಪ್ರಧಾನಿ ಮೋದಿ ಬಂದ ಬಳಿಕ ಡಬ್ಬಲ್ ಆಯ್ತು ಬಂಡೀಪುರದ ಆದಾಯ..!ಆದಾಯದಲ್ಲಿ ರಾಜ್ಯದಲ್ಲಿಯೇ ನಂಬರ್ ಓನ್..!

ಅನಾರೋಗ್ಯ, ಮಕ್ಕಳಿಲ್ಲದ ನೋವಿನಿಂದ ನೊಂದು ಪೊಲೀಸರಿಗೆ ವಾಯ್ಸ್‌ ಮೆಸೇಜ್‌ ಕಳಿಸಿ ಆತ್ಮಹತ್ಯೆ ಮಾಡಿಕೊಂಡ ದಂಪತಿ

ದಕ್ಷಿಣ ಕನ್ನಡ ಗಡಿ ಭಾಗದಲ್ಲಿರುವ ಕಾಸರಗೋಡಿನಲ್ಲಿ 5 ವರ್ಷದ ಬಾಲಕನಿಗೆ ನಿಫಾ ವೈರಸ್ ಶಂಕೆ