ಕ್ರೀಡೆ/ಸಿನಿಮಾಕ್ರೈಂರಾಜಕೀಯವೈರಲ್ ನ್ಯೂಸ್

ಪತ್ನಿಯ ಪರ ಪ್ರಚಾರಕ್ಕಿಳಿದ ನಟ ಶಿವರಾಜ್ ಕುಮಾರ್, ನಟನ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ ನಾಟೌಟ್: ಕನ್ನಡದ ಖ್ಯಾತ ಚಲನಚಿತ್ರ ನಟ ಶಿವರಾಜ್‌ ಕುಮಾರ್ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವುದರಿಂದ ಅಭಿನಯಿಸಿರುವ ಚಿತ್ರಗಳು ಮತ್ತು ಇರುವ ಜಾಹಿರಾತುಗಳ ಮೇಲೆ ನಿರ್ಬಂಧ ವಿಧಿಸಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿದೆ ಎನ್ನಲಾಗಿದೆ.

ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಪರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಆದ್ದರಿಂದ ಅವರ ಸಿನಿಮಾ, ಜಾಹೀರಾತುಗಳನ್ನು ನಿಷೇಧ ಮಾಡಬೇಕು ಎಂದು ಬಿಜೆಪಿ ಮನವಿ ಮಾಡಿದೆ. ಶಿವರಾಜ್ ಕುಮಾರ್ ನೀತಿ ಸಂಹಿತೆ ಜಾರಿಯಲ್ಲಿರುವಾಗ ಮೆರವಣಿಗೆ, ಘೋಷಣೆ ಮತ್ತು ಪಕ್ಷದ ಚಿಹ್ನೆಯುಳ್ಳ ಬಾವುಟ ಬಳಸಿದ್ದು ಅಪರಾಧ ಎಂದು ಉಲ್ಲೇಖಿಸಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದಾರೆ. ಪತ್ನಿಯ ಚುನಾವಣಾ ಪ್ರಚಾರಕ್ಕೆ ನಟ ಶಿವರಾಜ್ ಕುಮಾರ್ ಕೂಡ ಸಾಥ್ ನೀಡಿದ್ದರು ಎಂದು ವರದಿ ತಿಳಿಸಿದೆ.

Related posts

ಬೋಳು ತಲೆಯ ವಿಷಯ ಮುಚ್ಚಿಟ್ಟು ಎರಡನೇ ಮದುವೆಗೆ ಯತ್ನ..! ಸುಳ್ಳು ಹೇಳಿ ಸಿಕ್ಕಿಬಿದ್ದ ವರನಿಗೆ ವಧುವಿನ ಕಡೆಯವರು ಮಾಡಿದ್ದೇನು? ಇಲ್ಲಿದೆ ವೈರಲ್ ವಿಡಿಯೋ

ಕಲ್ಲುಗುಂಡಿ: ಬೆಲೆಬಾಳುವ ಮಣ್ಣಿನ ಮಡಿಕೆಗಳನ್ನು ಹೊತ್ತೊಯ್ದ ಕಳ್ಳರು..! ತಡರಾತ್ರಿ ಕಿಡಿಗೇಡಿಗಳಿಂದ ಕೃತ್ಯ..!

ಕುಡಿತದ ಅಮಲಿನಲ್ಲಿ ಬಾರ್‌ನೊಳಗೆ ಹೊಡೆದಾಟ, ಇಬ್ಬರು ಆಸ್ಪತ್ರೆಗೆ ದಾಖಲು