ದೇಶ-ವಿದೇಶರಾಜಕೀಯವೈರಲ್ ನ್ಯೂಸ್

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಪೂರ್ಣ ವಿರಾಮ..! ಹೊಸ ಸರ್ಕಾರದ ರಚನೆಗೆ ತಯಾರಿ

ನ್ಯೂಸ್ ನಾಟೌಟ್: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಭಾನುವಾರ(ಅ.13) ಹಿಂಪಡೆಯಲಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ತಯಾರಿ ನಡೆಯುತ್ತಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ರಾಷ್ಟ್ರಪತಿ ಆಡಳಿತ ಹಿಂದೆಗೆತ ಅಧಿಸೂಚನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಮಾಡಿದ್ದಾರೆ.
ಇತ್ತೀಚೆಗೆ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದ್ದು, ಸರ್ಕಾರ ರಚನೆಗೆ ಸಜ್ಜಾಗಿದೆ. ಎನ್‌ಸಿ ಉಪಾಧ್ಯಕ್ಷ ಉಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಈಗಾಗಲೇ ಮೈತ್ರಿಕೂಟದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 ಅನ್ನು ಆಗಸ್ಟ್ 5, 2019 ರಂದು ಸಂಸತ್ತು ಅಂಗೀಕರಿಸಿತು. ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370 ನೇ ವಿಧಿಯನ್ನು ಆ ದಿನ ರದ್ದುಗೊಳಿಸಲಾಗಿತ್ತು.

ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಔಪಚಾರಿಕವಾಗಿ ವಿಭಜಿಸಿದ ನಂತರ ಅಕ್ಟೋಬರ್ 31, 2019 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಆಡಳಿತವನ್ನು ಹೇರಲಾಗಿತ್ತು.

Click

https://newsnotout.com/2024/10/kiccha-sudeepa-bigboss-kananda-news-viral-news-kananda-news/
https://newsnotout.com/2024/10/darshan-bail-issue-to-verdict-kannada-news/
https://newsnotout.com/2024/10/siddaramayya-rti-kannada-news-snehamai-krishna/
https://newsnotout.com/2024/10/kannada-director-of-rajkumar-films-nomore/

Related posts

ಪಂಕ್ಚರ್ ಅಂಗಡಿಯಲ್ಲಿ ಕೆಲಸ ಮಾಡುವ ಯುವಕನಿಗೆ `ಡಿ’ಬಾಸ್ ಬಗ್ಗೆ ಮಾತಾಡಿದ್ರೆ ಜೀವಂತ ಸುಡೋದಾಗಿ ಬೆದರಿಕೆ..! ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು..!

ಹುಲಿ ಉಗುರು ಪ್ರಕರಣದ ಬಗ್ಗೆ ಮಾಜಿ ಗೃಹ ಸಚಿವ ಗರಂ ಆದದ್ದೇಕೆ..? ಅರಣ್ಯ ಇಲಾಖೆ ಅಧಿಕಾರಿಗಳು ಪ್ರಚಾರದ ಚಟಕ್ಕೆ ಬಿದ್ದಿದ್ದಾರೆ ಎಂದದ್ದೇಕೆ ಆರಗ ಜ್ಞಾನೇಂದ್ರ?

ದಕ್ಷಿಣ ಕನ್ನಡ: ದಿಢೀರ್ ಏರಿಕೆ ಕಂಡ ಅಡಿಕೆ ಧಾರಣೆ, ಇಲ್ಲಿದೆ ಸಂಪೂರ್ಣ ಮಾಹಿತಿ