ನ್ಯೂಸ್ ನಾಟೌಟ್ : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಎಸ್ ಐಟಿ ತನಿಖೆ ನಡೆಸುತ್ತಿದ್ದು,ಇಂದು ಬೆಳಗ್ಗೆ ಬೆಳ್ತಂಗಡಿಯ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ದೂರುದಾರನಾಗಿದ್ದ ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಹಿನ್ನೆಲೆ ದಾಳಿ ನಡೆಸಿದೆ. ಈ ವೇಳೆ ಚಿನ್ನಯ್ಯನ ಮೊಬೈಲ್ ಪತ್ತೆ ಆಗಿದೆ ಎಂದು ವರದಿಯಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ ಮನೆಯ ಶೋಧಕ್ಕೆ ಸರ್ಚ್ ವಾರಂಟ್ (ನ್ಯಾಯಾಲಯದ ಅನುಮತಿ) ಪಡೆದ ಎಸ್ ಐ ಟಿ, ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ತಿಮರೋಡಿ ಮನೆಗೆ ಮಹಜರು ನಡೆಸಿ ತೀವ್ರ ಶೋಧ ನಡೆಸಿತು. ಈ ವೇಳೆ ಮೊಬೈಲ್ ಪತ್ತೆಯಾಗಿದೆ.
ಮಹೇಶ್ ತಿಮರೋಡಿ ಹಾಗೂ ಆವರ ಸಹೋದರ ಮೋಹನ್ ಕುಮಾರ್ ಶೆಟ್ಟಿ ಮನೆಯಲ್ಲಿ ಕೂಡಾ ಎಸ್ ಐಟಿ ತನಿಖೆ ನಡೆಸುತ್ತಿದೆ. ಜಿತೇಂದ್ರ ದಯಾಮ ಸೇರಿದಂತೆ ಹಲವು ಅಧಿಕಾರಿಗಳ ತಂಡ ಕೆಲಸ ಮಾಡುತ್ತಿದೆ.
VIDEO | Karnataka: SIT raids activist Mahesh Shetty Timarody’s premises in connection with the Dharmasthala mass burial case.
(Full video available PTI Videos – https://t.co/n147TvrpG7) pic.twitter.com/9VpY5d0HXY
— Press Trust of India (@PTI_News) August 26, 2025