ಕ್ರೈಂ

ಪತಿಯೊಂದಿಗೆ ಜಗಳವಾಡಿ ಮನೆಯಿಂದ ತೆರಳಿದ ಪತ್ನಿ, ರೈಲಿಗೆ ತಲೆಕೊಟ್ಟು ಮೃತ್ಯು

ನ್ಯೂಸ್‌ ನಾಟೌಟ್‌ : ಪತಿಯೊಂದಿಗೆ  ಜಗಳವಾಡಿ ಮನೆಯಿಂದ ತೆರಳಿದ್ದ ಪತ್ನಿ ರೈಲಿಗೆ (Train) ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದಿಂದ ವರದಿಯಾಗಿದೆ.ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕಮಲಾ (35) ಎಂದು ಗುರುತಿಸಲಾಗಿದೆ.

ಮೃತ ಮಹಿಳೆ, ಸೋಮವಾರ ರಾತ್ರಿ ಪತಿಯೊಂದಿಗೆ ಜಗಳವಾಡಿ ಮನೆಯಿಂದ ತೆರಳಿದ್ದರು ಎಂದು ಹೇಳಲಾಗಿದೆ. ಬಳಿಕ ತಾಳಗುಪ್ಪ – ಬೆಂಗಳೂರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.ಮೃತ ಕಮಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿನೋಬನಗರ ಹಾಗೂ ರೈಲ್ವೆ ಪೊಲೀಸರು ಭೇಟಿಯಾಗಿ ಪರಿಶೀಲನೆ ನಡೆಸಿದ್ದಾರೆ.

Related posts

ಸುಳ್ಯ: ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆಗೈದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು, ಆ ಒಂದು ಸುಳಿವು ಹಂತಕನ ಜನ್ಮ ಜಾಲಾಡಿತು..!

ಕರ್ನಾಟಕದಲ್ಲಿ ಮತ್ತೆ ಸ್ಯಾಟಲೈಟ್ ಫೋನ್..! ನಸುಕಿನ ಜಾವ 3 ಗಂಟೆಗೆ ಪಾಕಿಸ್ತಾನಕ್ಕೆ ಕಾಲ್ ಮಾಡಿದ್ಯಾರು..?

ಪಾಕಿಸ್ತಾನದಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪ..! ನಡುಗಿದ ದೆಹಲಿ..!