ಕ್ರೈಂ

ನಿಗೂಢವಾಗಿ ಕಣ್ಮರೆಯಾಗಿದ್ದ ತಾಯಿ -ಮಗು ಬಾವಿಯೊಳಗೆ ಶವವಾಗಿ ಪತ್ತೆ, ಆತ್ಮಹತ್ಯೆ ಶಂಕೆ

224
Spread the love

ಕಾಸರಗೋಡು: ನಿಗೂಢವಾಗಿ ನಾಪತ್ತೆಯಾಗಿದ್ದ  ತಾಯಿ-ಮಗು ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನೀಲೇಶ್ವರ ದಲ್ಲಿ ನಡೆದಿದೆ. ನೀಲೇಶ್ವರ ಕಡಿಂಙಮೂಲೆಯ ರಮ್ಯಾ (34) ಹಾಗೂ ಎರಡೂವರೆ ವರ್ಷದ ಹೆಣ್ಣು ಮಗು ಮೃತಪಟ್ಟವರು. ಇಬ್ಬರೂ ಭಾನುವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸಿದ್ದರು. ಈ ನಡುವೆ ಮನೆ ಸಮೀಪದ ಬಾವಿಯಲ್ಲಿ ಇಂದು ಬೆಳಿಗ್ಗೆ ಇಬ್ಬರ ಮೃತ ದೇಹ ಪತ್ತೆಯಾಗಿದೆ. ಕಾಙಂಗಾಡ್ ನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಇಬ್ಬರ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ . ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಗುವುದು ಎಂದು ಎಂದು ಪೊಲೀಸರು ತಿಳಿಸಿದ್ದಾರೆ. ರಮ್ಯಾ ಕೆಲ ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ನೀಲೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

See also  ಬೆಳ್ಳಾರೆ: ಕಿಡ್ನಿಯಲ್ಲಿ ಗೆಡ್ಡೆ, ಮಗು ಸಾವು
  Ad Widget   Ad Widget   Ad Widget