ನ್ಯೂಸ್ ನಾಟೌಟ್: ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಅನುಚಿತವಾಗಿ ವರ್ತಿಸಿದ ಘಟನೆಗಳು ಹೆಚ್ಚುತ್ತಿದ್ದು,ಮಹಿಳೆಯೊಬ್ಬಳು ಪಾನಮತ್ತಳಾಗಿ ಉದ್ದಟತನ ತೋರಿದ ಘಟನೆ ನಡೆದಿದೆ.
ನವದೆಹಲಿ-ಕೋಲ್ಕತಾ ವಿಮಾನದಲ್ಲಿ ಮದ್ಯ ಸೇವಿಸಿ ಸಹ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಕೋಲ್ಕತಾದ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಸಿಬ್ಬಂದಿ ಮಹಿಳೆಯನ್ನು ಬಂಧಿಸಿದ್ದು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ವರದಿ ತಿಳಿಸಿದೆ.
ಬಂಧಿತೆ ಪರಮ್‌ಜಿತ್ ಕೌರ್ ಕುಡಿದ ಸ್ಥಿತಿಯಲ್ಲಿದ್ದರು ಎಂದು ಕಂಡು ಕೊಂಡಿದ್ದು ಸ್ವಲ್ಪ ಸಮಯದ ನಂತರ, ಅವಳು ತನ್ನ ಸಹ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದ್ದಳು ಎನ್ನಲಾಗಿದೆ.