ಕರಾವಳಿ

ಗುಜರಿ ಅಂಗಡಿಗೆ ಕೆಲಸಕ್ಕೆ ಹೋದ ಮಹಿಳೆ ನಾಪತ್ತೆ

ನ್ಯೂಸ್ ನಾಟೌಟ್: ಮಹಿಳೆಯೋರ್ವರು ನಾಪತ್ತೆಯಾಗಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಗುಜರಿ ಅಂಗಡಿಗೆ ಕೆಲಸಕ್ಕೆಂದು ತೆರಳುವ ವೇಳೆ ಘಟನೆ ಸಂಭವಿಸಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುಳಿತ್ತಡಿಯ ಆನಂದ ಎಂಬವರ ಪತ್ನಿ ಸರೋಜಾ ಕೆ.ಬಿ. ನಾಪತ್ತೆಯಾದವರು. ಈ ಹಿಂದೆ ಕೆಲಸ ಮಾಡಿಕೊಂಡಿದ್ದ ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿರುವ ಸಮೀರ್ ಎಂಬವರ ಗುಜರಿ ಅಂಗಡಿಗೆ  ಸೆ.23ಕ್ಕೆ ಕೆಲಸಕ್ಕೆಂದು ಹೋಗಿದ್ದರು. ಆದರೆ ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈಕೆಯನ್ನು ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಸಿಗದಿದ್ದ ಕಾರಣ  ಬಳಿಕ ಆಕೆಯ ಪತಿ ಆನಂದ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

Related posts

ಭಾರತ ಜಗತ್ತಿನಲ್ಲೇ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವುದಕ್ಕೆ ಪರಿಣಾಮಕಾರಿ ನಾಯಕತ್ವ ಕಾರಣ, ಮಂಗಳೂರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ತೋಟಕ್ಕೆಂದು ಹೋದ ಬೆಳ್ತಂಗಡಿಯ ಕೃಷಿಕ ನೀರುಪಾಲು..?

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: ದಕ್ಷಿಣಕನ್ನಡ ಪ್ರಥಮ, ಉಡುಪಿ ದ್ವಿತೀಯ