ಮೈಸೂರು: ನಗರದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪದ ಮೇರೆಗೆ ಪೊಲೀಸ್ ಸಿಬ್ಬಂದಿಯೊಬ್ಬರನ್ನು ನಜರ್ಬಾದ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೆಹಬೂಬ್ (36) ಬಂಧಿತ ಆರೋಪಿಯಾಗಿದ್ದು, ಈತ ರಾಘವೇಂದ್ರ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ. ಜೂನ್ 15 ರಂದು ರಾತ್ರಿ ಮನೆಯಿಂದ ಹೊರಗೆ ಬಂದಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಮಹಿಳೆ ನಜರ್ ಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಆರೋಪಿ ಮಹೆಬೂಬ್ ನನ್ನು ಬಂಧಿಸಿದ್ದಾರೆ.