ಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಮಹಿಳಾ ಪೊಲೀಸ್ ಅಧಿಕಾರಿಯ ಕೆನ್ನೆಗೆ ಹೊಡೆದ ಯುವಕ..! ಪೊಲೀಸರ ನಿರ್ಲಕ್ಷ್ಯದಿಂದ ರೈತನ ಪ್ರಾಣ ಹೋಗಿದೆ ಎಂದು ಗಾಮಸ್ಥರ ಪ್ರತಿಭಟನೆ..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್ : ಅಪಘಾತ ನಡೆದ ಬಳಿಕ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಯುವಕನೋರ್ವ ಮಹಿಳಾ ಪೊಲೀಸ್ ಅಧಿಕಾರಿಗೆ ಕಪಾಳ ಮೋಕ್ಷ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮಧ್ಯಪ್ರದೇಶದ ಟಿಕಮ್‌ ಗಢ್ ಜಿಲ್ಲೆಯಲ್ಲಿ ಸೋಮವಾರ(ನ.18) ಈ ಘಟನೆ ನಡೆದಿದ್ದು, ಯುವಕನೋರ್ವ ಪೊಲೀಸ್ ಅಧಿಕಾರಿಯ ಕಪಾಳಕ್ಕೆ ಹೊಡೆದಿದ್ದಾನೆ.
ಬಡಗಾಂವ್ ಧಸನ್ ಪೊಲೀಸ್ ಠಾಣಾ ವ್ಯಾಪ್ತಿಯ ದರಗ್ವಾನ್ ಗ್ರಾಮದಲ್ಲಿ ಭಾನುವಾರ ರಾತ್ರಿ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು 50 ವರ್ಷದ ಘುರ್ಕಾ ಲೋಧಿ ಎಂಬ ರೈತ ಸಾವನ್ನಪ್ಪಿದ್ದರು. ಸೋಮವಾರ ಬೆಳಗ್ಗೆ ಅವರ ಕುಟುಂಬಕ್ಕೆ ಈ ವಿಷಯ ತಿಳಿದಿದ್ದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.

ಪೊಲೀಸರ ತಡವಾದ ಸ್ಪಂದನೆಯಿಂದ ಗಾಯಗೊಂಡ ರೈತನಿಗೆ ಸಕಾಲದಲ್ಲಿ ವೈದ್ಯಕೀಯ ನೆರವು ದೊರೆಯದೇ ಆತ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪ್ರತಿಭಟನೆಯಲ್ಲಿ ಗ್ರಾಮಸ್ಥರು ಖರ್ಗಾಪುರ-ಬಡಗಾಂವ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಮಾಹಿತಿ ಪಡೆದ ಬಡಗಾಂವ್ ಪೊಲೀಸ್ ಠಾಣೆ ಪ್ರಭಾರಿ ಅನು ಮೇಘಾ ಗುಪ್ತಾ ದುಬೆ ಘಟನಾ ಸ್ಥಳಕ್ಕೆ ದೌಡಾಯಿಸಿ ರಸ್ತೆ ತಡೆ ತೆರವುಗೊಳಿಸಿದ್ದರು. ಆದರೆ, ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ಪೊಲೀಸರು ಮತ್ತು ಸ್ಥಳೀಯರ ನಡುವೆ ವಾಗ್ವಾದ ನಡೆದಿದೆ. ವಾಗ್ವಾದದ ನಡುವೆ ಮಹಿಳಾ ಪೊಲೀಸ್​ ಅಧಿಕಾರಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಕೋಪಗೊಂಡ ಯುವಕ ಪೊಲೀಸ್​ ಎಂದೂ ಕೂಡ ನೋಡದೆ ತಿರುಗಿಸಿ ಮಹಿಳಾ ಅಧಿಕಾರಿಯ ಕೆನ್ನೆಗೆ ಹೊಡೆದಿದ್ದಾನೆ.
ಈ ಘಟನೆಯಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಬಗ್ಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ ಎನ್ನಲಾಗಿದೆ.

Click

https://newsnotout.com/2024/11/75-year-old-lady-r-by-begging-man-kannada-news-d-viral-news-d/
https://newsnotout.com/2024/11/elon-musk-kannada-news-space-x-kannada-news-isro-issue-d/
https://newsnotout.com/2024/11/kannada-news-geethanjali-keerthi-suresh-kananda-news-d-d/
https://newsnotout.com/2024/11/4-month-pregnent-lady-kannada-news-viral-news-nomore-husband/
https://newsnotout.com/2024/11/kukke-subramanya-kannada-news-criketer-surya-kumar-yadhav-d/

Related posts

ಬಿಗ್‌ ಬಾಸ್‌ ಖ್ಯಾತಿಯ ಡ್ರೋನ್ ಪ್ರತಾಪ್ ಅರೆಸ್ಟ್..! ವಿಚಾರಣೆ ನಡೆಸುತ್ತಿರುವ ಪೊಲೀಸರು..!

ಆರು ಕ್ಷೌರಿಕರನ್ನು ಅಪಹರಿಸಿ ಕೊಂದ ಉಗ್ರರು..! ಈ ಘಟನೆ ನಡೆದದ್ದೆಲ್ಲಿ..?

ಬಸ್‌ ಓಡಾಟ ನಿಲ್ಲಿಸಬೇಡಿ, ಕಪ್ಪು ಫ್ಲ್ಯಾಗ್ ಹಾಕಿ ಬಸ್ ಓಡಿಸಿ: ಆತ್ಮಹತ್ಯೆಗೂ ಮುನ್ನ ಅವಿನಾಶ್ ಬಸ್ ಮಾಲೀಕ ಹೀಗೆ ಹೇಳಿದ್ಯಾಕೆ?