Latestಕರಾವಳಿಕೆವಿಜಿ ಕ್ಯಾಂಪಸ್‌

ಸುಳ್ಯ:ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ; ಜಾಗೃತಿ ಕಾರ್ಯಕ್ರಮದ ಮೂಲಕ ಗಮನ ಸೆಳೆದ ವಿದ್ಯಾರ್ಥಿಗಳು

560

ನ್ಯೂಸ್ ನಾಟೌಟ್ : ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಜೂನ್ ೨ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಅಗದ ತಂತ್ರ, ಸ್ವಸ್ಥವೃತ್ತ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ಈ ಕಾರ್ಯಕ್ರಮ ನೆರವೇರಿತು. ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ.ಯವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು.

ಈ ವೇಳೆ ತಂಬಾಕು ಸೇವನೆಯ ದುಷ್ಪರಿಣಾಮಗಳು, ಇದರಿಂದ ಉಂಟಾಗುವ ಕಾಯಿಲೆಗಳು ಹಾಗೂ ಸೇವನೆಯ ಚಟದಿಂದ ಹೊರಬರುವ ವಿಧಾನಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ದ್ವಿತೀಯ ವರ್ಷದ ಬಿ.ಎ.ಎಂ.ಎಸ್ ವಿದ್ಯಾರ್ಥಿನಿ ಕು.ಹರ್ಷಿತಾ ಎಂ. ಪ್ರಾತ್ಯಕ್ಷಿಕೆ ನೀಡಿದರು. ಇದೇ ಸಂದರ್ಭ ರಕ್ಷಿತಾ ಮತ್ತು ತಂಡದವರಿಂದ ಕಾಲೇಜಿನ ಆವರಣದಲ್ಲಿ ನೃತ್ಯ ಪ್ರದರ್ಶನ ಕೂಡ ನಡೆಯಿತು.ವಿದ್ಯಾರ್ಥಿನಿ ವೃಂದ ಪ್ರತಿಜ್ಞಾವಿಧಿ ಭೋಧಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಎಂ., ಸಂಸ್ಥೆಯ ಭೋಧಕ ಹಾಗೂ ಭೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಪದವಿ ವಿದ್ಯಾರ್ಥಿಗಳು, ಹಾಗೂ ಕಲಿಕಾ ವೈದ್ಯರುಗಳು ಉಪಸ್ಥಿತರಿದ್ದರು. ದೀಪ್ತಿ ಡಿ ಮತ್ತು ತಂಡದವರು ಪ್ರಾರ್ಥಿಸಿದರು.ಕುಮಾರಿ ಮಹಿತಾ ಭಟ್ ಸ್ವಾಗತಿಸಿ, ಕುಮಾರಿ ಶಾಂಭವಿ ಹೆಚ್.ಬಿ. ವಂದಿಸಿದರು.ಹೇಮಪ್ರಸಾದ್ ಎಂ.ಪಿ. ಹಾಗೂ ಕುಮಾರಿ ಸ್ಪಂದನಾ ಎಸ್.ಟಿ ಕಾರ್ಯಕ್ರಮ ನಿರೂಪಿಸಿದರು.

 

See also  ಮಂಗಳೂರು: ಪಹಲ್ಗಾಮ್ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್ ಹಾಕಿದವನ ವಿರುದ್ಧ ಪ್ರಕರಣ ದಾಖಲು..! ಆರೋಪಿಗಾಗಿ ಹುಡುಕಾಟ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget