ಕರಾವಳಿಕ್ರೈಂವೈರಲ್ ನ್ಯೂಸ್ಸಿನಿಮಾ

ಪಂಕ್ಚರ್ ಅಂಗಡಿಯಲ್ಲಿ ಕೆಲಸ ಮಾಡುವ ಯುವಕನಿಗೆ `ಡಿ’ಬಾಸ್ ಬಗ್ಗೆ ಮಾತಾಡಿದ್ರೆ ಜೀವಂತ ಸುಡೋದಾಗಿ ಬೆದರಿಕೆ..! ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು..!

246
Pc cr: Public tv kannada

ನ್ಯೂಸ್ ನಾಟೌಟ್: ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್(Darshan Thoogudeepa) ಅಭಿಮಾನಿಯೊಬ್ಬ ಯಾದಗಿರಿಯಲ್ಲಿ ಪಂಕ್ಚರ್ ಅಂಗಡಿಯಲ್ಲಿ ಕೆಲಸ ಮಾಡುವ ಯುವಕನಿಗೆ ಜೀವ ಬೆದರಿಕೆ ಹಾಕಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಇದೀಗ ಬೆದರಿಕೆ ಹಾಕಿದ್ದರು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಯಾದಗಿರಿ ಪೊಲೀಸರು ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಜು ಎಂಬಾತನನ್ನ ವಶಕ್ಕೆ ಪಡೆದಿದ್ದಾರೆ. ಗಂಗಾ ನಗರದ ನಿವಾಸಿ ಅಭಿ ಎಂಬ ಯುವಕನಿಗೆ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಾಜು ಇತ್ತೀಚೆಗೆ ಬೆದರಿಕೆ ಹಾಕಿದ್ದರು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಆಡಿಯೋದಲ್ಲಿ ರಾಜು, ಬಾಸ್ ಬಗ್ಗೆ ಮಾತನಾಡಿದ್ರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಬಾಸ್ ಬಾಸ್ ಎಂದು ಬಕೆಟ್ ಯಾಕೆ ಹಿಡಿತೀರಿ, ತಾಯಿ-ತಂದೆಗೆ ಬಕೆಟ್ ಹಿಡಿಯಿರಿ ಎಂದು ಅಭಿ ಇನ್ಸ್ಟಾಗ್ರಾಮ್‍ನಲ್ಲಿ ಸ್ಟೇಟಸ್ ಹಾಕಿದ್ದ ಎನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ ರಾಜು, ಅಭಿಗೆ ಕರೆ ಮಾಡಿ, ವೀಡಿಯೋ ಡಿಲೀಟ್ ಮಾಡದೇ ಇದ್ರೆ ಜೀವಂತ ಸುಡೋದಾಗಿ ಬೆದರಿಸಿದ್ದಾನೆ. ಜೊತೆಗೆ ಕೂಡಲೇ ಕ್ಷಮೆ ಕೇಳಿ ವೀಡಿಯೋ ಮಾಡಿ ಹಾಕುವಂತೆ ಧಮ್ಕಿ ಹಾಕಿದ್ದಾನೆ ಎನ್ನಲಾಗಿದೆ. ಇನ್ನೂ ರಾಜು ಧಮ್ಕಿ ಹಾಕಿದ್ದ ಎನ್ನಲಾದ ಆಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಕೂಡಲೇ ಮಾಹಿತಿ ಪಡೆದು ರಾಜುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Click 👇

https://newsnotout.com/2024/06/film-chember-issue-banning-darshan-and-visiting
https://newsnotout.com/2024/06/darshan-and-gang-issue-today-future-decisions-have-been-decided
https://newsnotout.com/2024/06/darshan-mb-patil-kannada-news-agriculture-department
See also  ದಬ್ಬಡ್ಕದಲ್ಲಿ ಜಲಸ್ಫೋಟ, ಭಾರಿ ನೀರು, ಜನ ಜೀವನ ತತ್ತರ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget