ವೈರಲ್ ನ್ಯೂಸ್ಸಿನಿಮಾ

ಯಶ್ ಬಾಲಿವುಡ್ ನ ‘ರಾಮಾಯಣ’ ಸಿನಿಮಾದ ನಿರ್ಮಾಪಕ, ಇಲ್ಲಿದೆ ಸಂಪೂರ್ಣ ಮಾಹಿತಿ

239

ನ್ಯೂಸ್ ನಾಟೌಟ್: ಬಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ರಾಮಾಯಣ ಚಿತ್ರೀಕರಣ ಪ್ರಾರಂಭವಾಗಿದೆ. ಭಾರತೀಯ ಪುರಾಣದ ಕಥೆಯನ್ನು ತೆರೆದಿಡುವ ರಾಮಾಯಣ ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಕೈ ಜೋಡಿಸಿದ್ದಾರೆ. ರಾಮಾಯಣಕ್ಕೆ ಯಶ್ (Yash) ಕೂಡ ನಿರ್ಮಾಪಕ ಎಂದು ವರದಿ ತಿಳಿಸಿದೆ. ರಾಮಾಯಣ (Ramayana) ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ.

ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಿಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ ಎನ್ನಲಾಗಿದ್ದು, ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಫೋಕಸ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ನಿರ್ಮಿಸುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ, ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ನಾನು ಸಿದ್ಧನಾಗಿದ್ದೇನೆ. ನಮ್ಮ ಸಂಸ್ಕ್ರತಿಯನ್ನು ಜಗತ್ತಿಗೆ ಪರಿಚಯಿಸಲು ನಾನು ಉತ್ಸಕನಾಗಿದ್ದು, ನಾನು ಯಶ್ ಅವರಲ್ಲಿಯೂ ಇದನ್ನು ಕಂಡುಕೊಂಡಿದ್ದೇನೆ. ಅವರ ಪಯಣದಿಂದ ನಾನು ಸ್ಪೂರ್ತಿ ಪಡೆದಿದ್ದೇನೆ. ಯಶ್ ಅವರಲ್ಲಿರುವ ಯೋಜನೆಯನ್ನು ಅರಿತುಕೊಂಡಿದ್ದೇನೆ. ರಾಮಾಯಣ ದೃಶ್ಯಕಾವ್ಯವನ್ನು ತೆರೆಗೆ ತರುತ್ತಿದ್ದೇವೆ ಎಂದರು.

ಯಶ್ ಮಾತನಾಡಿ, ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರರ್ದಶಿಸುವುದು ನನ್ನ ಬಹುದಿನಗಳ ಕನಸು. ಅದರ ಹುಡುಗಾಟದಲ್ಲಿ ನಾನು ಅತ್ಯುತ್ತಮ VFC ಸ್ಟುಡಿಯೋ ಕಂಡುಕೊಂಡಿದ್ದೇನೆ. ಅದರ ಹಿಂದಿನ ಪ್ರೇರಕ ಶಕ್ತಿ ಒಬ್ಬ ಭಾರತೀಯ. ನಾವು ಸಿನಿಮಾ ರಂಗದ ಬೇರೆ ವಿಷಯಗಳ ಬಗ್ಗೆ ಚರ್ಚೆ ನಡೆಸುವಾಗ ರಾಮಾಯಣ ವಿಷಯವು ಬಂದಿತು. ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪ್ರಸ್ತುತಪಡಿಸುವ ಸಿನಿಮಾ ಇದಾಗಿದ್ದು, ಈ ಮಹಾಕಾವ್ಯ ಸಿನಿಮಾ ರೂಪ ತಾಳುತ್ತಿದೆ. ಆ ಅತ್ಯುತ್ತಮ ಅನುಭವನ್ನು ಜಗತ್ತಿಗೆ ನೀಡಲು ನಾವು ಕಾತರರಾಗಿದ್ದೇವೆ ಎಂದರು. ಯಶ್ ತಮ್ಮದೇ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಎಂಬ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಈ ಬ್ಯಾನರ್ ನಡಿ ‘ಟಾಕ್ಸಿಕ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಜೊತೆಗೆ ‘ಮಾನ್ಸ್ಟರ್ ಮೈಂಡ್’ ಕ್ರಿಯೇಷನ್ಸ್ ಕೂಡ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣದಲ್ಲಿ ಪಾಲುದಾರಿಕೆಯನ್ನು ಹೊಂದಿದೆ. ಇದೇ ಬ್ಯಾನರ್ ನಡಿ ‘ರಾಮಾಯಣ’ ಸಿನಿಮಾಗೂ ಯಶ್ ಬಂಡವಾಳ ಹೂಡುತ್ತಿದ್ದಾರೆ ಎನ್ನಲಾಗಿದೆ.

See also  ಜ್ಞಾನವಾಪಿಯಲ್ಲಿ ನಡೆಯುತ್ತಿರುವ ಪೂಜೆ ತಡೆಯುವಂತೆ ಮುಸ್ಲಿಂ ಸಮಿತಿ ಮನವಿ, ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget