Latestಕ್ರೀಡೆ/ಸಿನಿಮಾವೈರಲ್ ನ್ಯೂಸ್ಸಿನಿಮಾ

ವರ್ಷಕ್ಕೆ 30 ದಿನ ಮಾತ್ರ ತೆರೆಯುವ ಕೊಟ್ಟಿಯೂರು ಶಿವ ದೇಗುಲಕ್ಕೆ ನಟ ದರ್ಶನ್ ಭೇಟಿ..! ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಕೂಡ ಸಾಥ್..!

639

ನ್ಯೂಸ್ ನಾಟೌಟ್: ಡೇವಿಲ್ ಚಿತ್ರೀಕರಣ ಮುಕ್ತಾಯದ ಬಳಿಕ ದೇವರ ಅನುಗ್ರಹ ಪಡೆಯಲು ನಟ ದರ್ಶನ್ ಟೆಂಪನ್ ರನ್ ಶುರು ಮಾಡಿದ್ದಾರೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ.

ಕೇರಳದ(Kerala) ಕೊಣ್ಣುರು ಸಮೀಪದಲ್ಲಿರುವ ಕೊಟ್ಟಿಯೂರು ಶಿವ ದೇವಸ್ಥಾನಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಕೂಡ ಸಾಥ್ ನೀಡಿದ್ದಾರೆ. ಈ ವೇಳೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಕೇರಳದ ಕೊಟ್ಟಿಯೂರು ಶಿವ ದೇವಾಲಯವು ಭಾರತದ ಅತ್ಯಂತ ಪ್ರಾಚೀನ ಮತ್ತು ಪವಿತ್ರ ತೀರ್ಥಕ್ಷೇತ್ರಗಳಲ್ಲಿ ಒಂದಾಗಿದೆ. ಪ್ರತಿವರ್ಷವೂ ವೈಶಾಖ ಮಾಹೋತ್ಸವದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತದೆ. ಈ ದೇವಸ್ಥಾನವು ದಕ್ಷಿಣ ಕಾಶಿ ಎಂದು ಕರೆಯಲ್ಪಡುವುದರಿಂದ ಅದರ ಧಾರ್ಮಿಕ ಮಹತ್ವವು ಅಪಾರವಾಗಿದೆ.

ಕೊಟ್ಟಿಯೂರಿನಲ್ಲಿ ಎರಡು ದೇವಸ್ಥಾನಗಳಿವೆ. ಇಕ್ಕರೆ ಕೊಟ್ಟಿಯೂರು ಮತ್ತು ಅಕ್ಕರೆ ಕೊಟ್ಟಿಯೂರು. ಅಕ್ಕರೆ ಕೊಟ್ಟಿಯೂರು ದೇವಾಲಯವು ವೈಶಾಖ ಮಹೋತ್ಸವದ ಸಮಯದಲ್ಲಿ ಮಾತ್ರ ತೆರೆಯಲ್ಪಡುವ ತಾತ್ಕಾಲಿಕ ಮಂದಿರವಾಗಿದೆ. ಆದರೆ ಇಕ್ಕರೆ ಕೊಟ್ಟಿಯೂರು ದೇವಾಲಯವು ನಿಯಮಿತ ಪೂಜಾ ವಿಧಿಗಳನ್ನು ನಡೆಸುವ ಶಾಶ್ವತ ಮಂದಿರವಾಗಿದೆ. ಇಲ್ಲಿನ ವೈಶಾಖ ಮಹೋತ್ಸವ ಸುಮಾರು 28 ದಿನಗಳವರೆಗೆ ನಡೆಯುತ್ತದೆ. ಈ ವರ್ಷ ಜೂ.8ರಿಂದ ಪ್ರಾರಂಭವಾಗಿ ಜು.4ರವರೆಗೆ ದೇವಸ್ಥಾನ ತೆರೆದಿರುತ್ತದೆ. ಆದರೆ ಜೂ.30ರ ನಂತರ ಮಹಿಳಾ ಭಕ್ತಾದಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಜೊತೆಗೆ ಇಲ್ಲಿ ಬರುವ ಭಕ್ತಾದಿಗಳಿಗೆ ತಂಗಲು ವಸತಿ ಸೌಲಭ್ಯವು ಇರುತ್ತದೆ. ದೇವಸ್ಥಾನವು ಬೆಳಿಗ್ಗೆ 5ರಿಂದ ರಾತ್ರಿ 8:30ರವರೆಗೆ ಮಾತ್ರ ತೆರೆದಿರುತ್ತದೆ.

ಇಲ್ಲಿ ನಡೆಯುವ ಜಾತ್ರೆ “ಕೊಟ್ಟಿಯೂರು ಉತ್ಸವ” ಎಂಬ ಹೆಸರಿನಿಂದ ಪ್ರಸಿದ್ಧವಾಗಿದ್ದು, ಇದು ದಕ್ಷಿಣ ಭಾರತದ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯುವ ಧಾರ್ಮಿಕ ಆಚರಣೆಗಳಲ್ಲಿ ಒಂದಾಗಿದೆ. ಪಾರ್ವತಿಯ ತಪಸ್ಸು, ದಕ್ಷಿಣ ಯಾಗ ಮತ್ತು ಶೈವ ಪರಂಪರೆಯ ಕಥೆಗಳ ಸ್ಮರಣಾರ್ಥವಾಗಿ ಈ ಉತ್ಸವ ಆಚರಿಸಲಾಗುತ್ತದೆ.
ಕೆಲ ತಿಂಗಳ ಹಿಂದೆ ಕಣ್ಣೂರು ಬಳಿಯ ಶ್ರೀಕ್ಷೇತ್ರ ಮಡಾಯಿ ಕಾವು ಶ್ರೀಭಗವತೀ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಕುಟುಂಬ ಸಮೇತರಾಗಿ ಶತ್ರು ಸಂಹಾರ ಯಾಗ ಮಾಡಿಸಿ, ಪೂಜೆ ಸಲ್ಲಿಸಿದ್ದರು.

ಅಧಿಕೃತವಾಗಿ ಯುದ್ಧ ಘೋಷಿಸಿದ ಇರಾನ್ನ ಸರ್ವೋಚ್ಛ ನಾಯಕ..! ಶರಣಾಗುವಂತೆ ಧಮ್ಕಿ ಹಾಕಿದ ಟ್ರಂಪ್‌..!

ಫೇಕ್ ಅಕೌಂಟ್‌ ನಿಂದ ಮಹಿಳೆಯರ ಮಾನಹಾನಿ ಮಾಡುತ್ತಿದ್ದ ಯುವಕ ಅರೆಸ್ಟ್..! ಮೊಬೈಲ್‌ ನಲ್ಲಿ 13,500 ಅಶ್ಲೀಲ ಚಿತ್ರ ಪತ್ತೆ..!

See also  ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿದ ಪ್ರಕರಣ, ಆರೋಪಿಯ ತಂದೆ ಜಗನ್ನಿವಾಸ್ ರಾವ್ ಬಂಧನ, ಜಾಮೀನಿನಲ್ಲಿ ಬಿಡುಗಡೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget