ದಕ್ಷಿಣ ಕನ್ನಡಸುಳ್ಯ

ಸುಳ್ಯ: ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯೋಗ ತರಬೇತಿ ಕಾರ್ಯಾಗಾರ

ನ್ಯೂಸ್ ನಾಟೌಟ್: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶುಕ್ರವಾರ (ಜೂ. 21) ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ವಸ್ಥವೃತ್ತ ವಿಭಾಗ ಹಾಗೂ ಈಶ ಯೋಗ ಕೇಂದ್ರ ಮಂಗಳೂರು ಇದರ ಸಹಯೋಗದೊಂದಿಗೆ ಯೋಗ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ದ್ವಿತೀಯ ವರ್ಷದ ಬಿ.ಎ.ಎಂ.ಎಸ್ ವಿದ್ಯಾರ್ಥಿಗಳಿಗೆ ಈಶ ಯೋಗಕೇಂದ್ರ ಮಂಗಳೂರಿನ ಕು. ಸೃಷ್ಠಿ ಎಸ್. ಶೆಟ್ಟಿ ಅವರು ಯೋಗ ಪ್ರಾತ್ಯಕ್ಷಿಕೆಯೊಂದಿಗೆ, ಯೋಗದ ಮಹತ್ವ ವಿವರಿಸಿ ಕಾರ್ಯಾಗಾರ ನಡೆಸಿಕೊಟ್ಟರು.

ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ., ಸಂಸ್ಥೆಯ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ., ಸಂಸ್ಥೆಯ ದ್ರವ್ಯಗುಣ ವಿಭಾಗದ ಪ್ರಾಧ್ಯಾಪಕಿ ಡಾ. ಕವಿತಾ ಬಿ.ಎಂ., ಸಂಸ್ಥೆಯ ಪಂಚಕರ್ಮ ವಿಭಾಗ ಮುಖ್ಯಸ್ಥ ಡಾ. ಸನತ್ ಕುಮಾರ್ ಡಿ.ಜಿ., ಕಾಲೇಜಿನ ಸ್ವಸ್ಥವೃತ್ತ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಜಯವಾಣಿ ಎಂ.ಜಿ., ಡಾ. ಶಭೀನಾ ಟಿ. ಟಿ. ಹಾಗೂ ಡಾ. ಐಶ್ವರ್ಯ ಬಾಲಗೋಪಾಲ್, ಕಾಲೇಜಿನ ಎಲ್ಲಾ ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು.

Related posts

ಲೋಕಸಭಾ ಚುನಾವಣೆಗೆ ಟಿಕೆಟ್​ ಕೈತಪ್ಪಿದ ವಿಚಾರ,ಹುಟ್ಟು ಹಬ್ಬದಂದು ಅಚ್ಚರಿಯ ಹೇಳಿಕೆ;ಕಾಂಗ್ರೆಸ್​ ನಾಯಕರು ಸಂಪರ್ಕಿಸಿರೋದು ನಿಜ ಎಂದ ಮಾಜಿ ಮುಖ್ಯ ಮುಂತ್ರಿ ಡಿ.ವಿ.ಎಸ್‌.

ಸಂಪಾಜೆ: ಅಲ್ಪ ಕಾಲದ ಅಸೌಖ್ಯದಿಂದ ಗುಂಡ್ಯ ಪುರುಷೋತ್ತಮ ನಿಧನ, ಕಣ್ಣೀರಾದ ಕುಟುಂಬ ವರ್ಗ

ಕೆ.ವಿ.ಜಿ. ಮೆಡಿಕಲ್ ಕಾಲೇಜ್ ನ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿಗೆ 100% ಫಲಿತಾಂಶ