ಕರಾವಳಿಕ್ರೈಂ

ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಶರಣು,ಡೆತ್ ನೋಟ್ ನಲ್ಲೇನಿದೆ?

295

ನ್ಯೂಸ್ ನಾಟೌಟ್ :ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ನಿರುದ್ಯೋಗ ಕಾರಣದಿಂದಾಗಿ ಈಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೇಲ್ನೋಟಕ್ಕೆ ತಿಳಿದು ಬಂದಿದೆ.

ಉಡುಪಿ ಸಮೀಪದ ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಎಂ.ಕಾಂ. ಪದವಿ ಪಡೆದಿದ್ದ ಗೌತಮಿ ಇತ್ತೀಚೆಗೆ ಬ್ಯಾಂಕ್‌ ಪರೀಕ್ಷೆ ಮತ್ತು ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಪರೀಕ್ಷೆ ಬರೆದಿದ್ದಾಳೆ.ಆದರೆ ಆಕೆಗೆ ಉದ್ಯೋಗ ಸಿಗಲ್ಲಿಲ್ಲವಾದ್ದರಿಂದ ಮನನೊಂದಿದ್ದಳು ಎಂದು ತಿಳಿದು ಬಂದಿದೆ. ಹೀಗಾಗಿ ಯುವತಿ ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ನೇಣಿಗೆ ಶರಣಾಗಿದ್ದ ಗೌತಮಿ ಅವರನ್ನು ಬೈಂದೂರು  ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಆದರೆ ವೈದ್ಯರು ಆಕೆ  ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಖಾಸಗಿ ಸಂಸ್ಥೆಯ ತರಬೇತಿ ವಿಮಾನ ಪತನ..! ಮುಂದೇನಾಯ್ತು..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget